ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಒಂದರಿಂದ ಹತ್ತನೆ ತರಗತಿ ಶಾಲೆಗಳು ಗುರುವಾರದಿಂದ ಆರಂಭಗೊಂಡಿದ್ದು, ಎಲ್ಲೆಡೆ ಶಾಲೆಗಳಿಗೆ ತಳಿರು ತೋರಣಗಳನ್ನು ಕಟ್ಟಿ ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳಲಾಯಿತು.
ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿರುವ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಸೈಯದ್ ಇಸ್ಮಾಯಿಲ್ ಮಕ್ಕಳಿಗೆ ಬಲೂನ್ ಹಾಗೂ ಗುಲಾಬಿ ಹೂಗಳನ್ನು ನೀಡಿ ಶಾಲೆಗೆ ಬರಮಾಡಿಕೊಂಡು ಮಾತನಾಡುತ್ತ
ಸರ್ಕಾರಿ ಶಾಲೆಯ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ, ಪಠ್ಯಪುಸ್ತಕ, ಸಮವಸ್ತ್ರ, ಶೂ, ಸಾಕ್ಸ್‌ಗಳನ್ನು ನೀಡಲಾಗುತ್ತಿದೆ. ಅದೇ ರೀತಿಯ ಉರ್ದು ಶಾಲೆಗಳಿಗೆ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗಬೇಕಾಗಿರುವುದರಿಂದ ಸರ್ಕಾರ ಮುತುವರ್ಜಿ ವಹಿಸಿ ಬಲವರ್ಧನೆಗೊಳಿಸಬೇಕೆಂದು ಮನವಿ ಮಾಡಿದರು.
ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಸುಮಯ್ಯಭಾನು, ಶಿಕ್ಷಕಿಯರುಗಳಾದ ಲತಾ, ಉಮ, ಫಾತಿಮ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.