ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಇದೇ ಡಿ.27ರಂದು ಬೆಳಿಗ್ಗೆ 10ಕ್ಕೆ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
2025-26ನೇ ಸಾಲಿನ ಜಿಲ್ಲಾಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಪ್ರತ್ಯೇಕ ವಿಭಾಗದಲ್ಲಿ ಸಹಪಠ್ಯ ಚಟುವಟಿಕೆಗಳ ಸ್ಪರ್ಧಾ ಕಾರ್ಯಕ್ರಮಗಳಾದ ಭಕ್ತಿಗೀತೆ ಸ್ಪರ್ಧೆ, ಆಶು ಭಾಷಣ ಸ್ಪರ್ಧೆ,
ಪ್ರಬಂಧ ಸ್ಪರ್ಧೆ, ಸ್ಥಳದಲ್ಲೇ ಪಾಠೋಪಕರಣ (ಟಿಎಲ್‍ಎಂ) ತಯಾರಿಕೆ ಸ್ಪರ್ಧೆ, ಸ್ಥಳದಲ್ಲೇ ಚಿತ್ರ ಬರೆಯುವ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ (ಸಾಮಾನ್ಯ ಜ್ಞಾನ), ರಸಪ್ರಶ್ನೆ ಸ್ಪರ್ಧೆ (ವಿಜ್ಞಾನ)ಗಳು ನಡೆಯಲಿವೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ ತಿಳಿಸಿದ್ದಾರೆ.

