ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಏಕದಿನದ ಮಹಿಳಾ ವಿಶ್ವಕಪ್ ಫೈನಲ್ನಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿ ವಿಶ್ವ ಚಾಂಪಿಯನ್ ಪಟ್ಟಕ್ಕೇರಿದೆ.
ನವಿ ಮುಂಬೈನ ಡಿವೈ ಪಾಟೀಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 298 ರನ್ ಕಲೆಹಾಕಿತು.
ಸೌತ್ ಆಫ್ರಿಕಾ ತಂಡವು ಈ ಗುರಿ ಬೆನ್ನತ್ತಿ 45.3 ಓವರ್ಗಳಲ್ಲಿ 246 ರನ್ ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 52 ರನ್ಗಳ ಭರ್ಜರಿ ಜಯ ಸಾಧಿಸಿ ಚೊಚ್ಚಲ ಮಹಿಳಾ ವಿಶ್ವ ಕಪ್ ಟ್ರೋಫಿ ಮುಡಿಗೇರಿಸಿಕೊಂಡಿದೆ.
ಟೀಮ್ ಇಂಡಿಯಾ ಆಟಗಾರ್ತಿಯರು ಗೆಲುವಿನ ಬಳಿಕ ವಿಶೇಷ ವಿಜಯಗೀತೆ ಹಾಡುವ ಮೂಲಕ ಸಂಭ್ರಮಿಸಿದರು. ಈ ಹಾಡಿನ ತುಣುಕು ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಭಾರತ ತಂಡ: ಮಹಿಳಾ ತಂಡದ ನಾಯಕಿ ಹರ್ಮನ್ ಪ್ರೀತ್ ಕೌರ್, ಉಪನಾಯಕಿ ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ಜೆಮಿಮಾ ರೊಡ್ರಿಗಸ್, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ, ವಿಕೆಟ್ ಕೀಪರ್ ರಿಚಾ ಘೋಷ್, ಕ್ರಾಂತಿ ಗೌಡ್, ಅಮನ್ಜೋತ್ ಕೌರ್, ರಾಧಾ ಯಾದವ್, ಶ್ರೀ ಚಾರಣಿ, ವಿಕೆಟ್ ಕೀಪರ್ ಯಾಸ್ತಿಕಾ ಭಾಟಿಯಾ, ಸ್ನೇಹ್ ರಾಣಾ ತಂಡದಲ್ಲಿದ್ದಾರೆ.

