ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ವೇದಾವತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಚಿತ್ರದುರ್ಗ ಇವರು ನಡೆಸಿದಂತ ಜಿಲ್ಲಾಮಟ್ಟದ ಯುವಜನೋತ್ಸವ 2025- 26 ನೇ ಸಾಲಿನ ಕಾರ್ಯಕ್ರಮದಲ್ಲಿ
ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಸಾಂಪ್ರದಾಯಿಕ ಉಡುಪು ಸ್ಪರ್ಧೆಯಲ್ಲಿ ಪುರುಷ ವಿಭಾಗ ಪ್ರಥಮ ಸ್ಥಾನ, ಮಹಿಳೆಯರ ವಿಭಾಗ ಪ್ರಥಮ ಸ್ಥಾನ, ಜಾನಪದ ಗೀತೆ ಪ್ರಥಮ ಸ್ಥಾನ , ಜಾನಪದ ನೃತ್ಯ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.
ಜಾನಪದ ಗೀತೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ. ಬಹುಮಾನ ಪಡೆದಂತಹ ಎಲ್ಲಾ ವಿದ್ಯಾರ್ಥಿಗಳಿಗೂ ಹಾಗೂ ಸಾಂಸ್ಕೃತಿಕ ವಿಭಾಗದ ಸಂಚಾಲಕರಿಗೂ ಕಾಲೇಜಿನ ಪ್ರಾಂಶುಪಾಲರು, ಸಿಬ್ಬಂದಿ ವರ್ಗದವರು ಶುಭಾಶಯ ಕೋರಿದ್ದಾರೆ.

