ಜೋಗ ಜಲಪಾತ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತದ ಮುಖ್ಯದ್ವಾರ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಜನವರಿ 01 ರಿಂದ ಮಾರ್ಚ್ 15ರ ವರೆಗೆ 3 ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ.

ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆಯಾಗಬಾರದೆಂಬ ಕಾರಣದಿಂದ ಪ್ರವೇಶ ನಿರ್ಬಂಧಿಸಲಾಗಿದ್ದು,

- Advertisement - 

ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-251444 ನ್ನು ಸಂಪರ್ಕಿಸುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

 

- Advertisement - 

 

Share This Article
error: Content is protected !!
";