ಭೀಕರ ಅಪಘಾತ 3 ಮಂದಿ ಪಿಎಸ್ಐಗಳ ಸಾವು

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ನಿಲುಗಡೆ ಮಾಡಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯೊಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಪೊಲೀಸ್​ ರಿಸರ್ವ್ ಸಬ್ ಇನ್ಸ್​ಪೆಕ್ಟರ್ (ಆರ್​ಎಸ್​​ಐ)ಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಬಳಿ ಭಾನುವಾರ ಮುಂಜಾನೆ ಸಂಭವಿಸಿದೆ.

ಘಟನೆಯಲ್ಲಿ ಇನ್ನಿಬ್ಬರು ಎಸ್​​ಐಗಳಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ ಆರ್​ಎಸ್​​ಐಗಳನ್ನು ಮಂಜುನಾಥ್
, ಅಂಬರೀಷ್ ಹಾಗೂ ಸಚಿನ್ ಎಂದು ಗುರುತಿಸಲಾಗಿದೆ. ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಅವಘಡ ಸಂಭವಿಸಿದೆ.

- Advertisement - 

ಮೃತ ಪೊಲೀಸ್​ ಅಧಿಕಾರಿಗಳು ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದರು. ಗಂಭೀರ ಗಾಯಗೊಂಡಿರುವ ಪಿಎಸ್​ಐ ಈಶ್ವರ್ ಹಾಗೂ ಆರ್​ಎಸ್​ಐ ಮಹಾಂತೇಶ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದ ರಭಸಕ್ಕೆ ಲಾರಿಯ ಅಡಿ ಸಿಲುಕಿದ್ದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ರಂಜಿತ್ ಬಂಡಾರು, ಐಮಂಗಲ ಠಾಣೆ ಪೊಲೀಸ್​ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

- Advertisement - 

ಎಸ್​ಪಿ ಮಾಹಿತಿ: ಕಾರಿನಲ್ಲಿದ್ದ ಐವರು ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಬೆಂಗಳೂರಿಂದ ಬಳ್ಳಾರಿಗೆ ತೆರಳುವ ವೇಳೆ ಅಪಘಾತವಾಗಿದೆ. ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಎಸ್​ಪಿ ರಂಜಿತ್ ಕುಮಾರ್ ಬಂಡಾರು ಮಾಹಿತಿ ನೀಡಿದ್ದಾರೆ.

 

Share This Article
error: Content is protected !!
";