ಭೀಕರ ಕಾರು ಅಪಘಾತ, 3 ಸಾವು, ಇಬ್ಬರಿಗೆ ಗಾಯ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬಳ್ಳಾರಿ:
ಕಾರೊಂದು ರಸ್ತೆ ಬದಿಯ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಪಟ್ಟಣದ ದೇವಿನಗರದ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಬುಧವಾರ ಮುಂಜಾನೆ ಸಂಭವಿಸಿದೆ. 

ಸಿರುಗುಪ್ಪ ತಾಲೂಕಿನ ನಿಟ್ಟೂರು ಗ್ರಾಮದ ಪ್ರಸಾದ್ ರಾವ್ (75), ಸಿರುಗುಪ್ಪ ನಿವಾಸಿಗಳಾದ ವಿಜಯ (70) ಹಾಗೂ ಸಂಧ್ಯಾ (35) ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡ ನಿಟ್ಟೂರು ಗ್ರಾಮದ ಪದ್ಮ (70) ಹಾಗೂ ಸಿರುಗುಪ್ಪದ ಬ್ರಹೇಶ್ವರರಾವ್ (45) ಅವರನ್ನು ಬಳ್ಳಾರಿಯ ಟ್ರಾಮಾ ಕೇರ್ ಸೆಂಟರ್​​ಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

- Advertisement - 

ಮೂವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸೇರಿದಂತೆ ಒಂದೇ ಕುಟುಂಬದ ಐವರು ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿಂದ ಹಿಂತಿರುಗಿ ಬರುವಾಗ ಅಪಘಾತ ಸಂಭವಿಸಿದೆ.

ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಗಾಯಾಳುಗಳು ಹಾಗೂ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದರು.

- Advertisement - 

ನಿದ್ದೆ ಮಂಪರಿನಲ್ಲಿ ಚಾಲಕ ಚಾಲನೆ ಮಾಡಿರುವುದು ಹಾಗೂ ಮಂಜುಗಟ್ಟಿದ ವಾತಾವರಣದ ಹಿನ್ನೆಲೆಯಲ್ಲಿ ರಸ್ತೆ ಕಾಣದೇ ಅಪಘಾತ ಸಂಭವಿಸಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತೆಕ್ಕಲಕೋಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share This Article
error: Content is protected !!
";