ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದ ಜೈಲುಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿರುವುದು ಎನ್ಐಎ ದಾಳಿಯಿಂದ ಬಹಿರಂಗಗೊಂಡಿದೆ. ಈ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅಶೋಕ್ ಅವರು, ಜೈಲಿನಲ್ಲಿರುವ ಉಗ್ರರಿಗೆ ರಾಜಾತಿಥ್ಯ ಸಿಗುತ್ತಿದೆ ಇದಕ್ಕೆ ಗೃಹ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಅಶೋಕ್ ಆರೋಪಿಸಿದ್ದಾರೆ.
ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಹೊರಹಾಕಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಜೈಲಿನಲ್ಲಿರುವ ಕೈದಿಗಳ ಚಲನವಲನದ ಬಗ್ಗೆ ನಿಗಾ ವಹಿಸಬೇಕು ಮತ್ತು ಮೊಬೈಲ್ ಫೋನ್‌ಗಳನ್ನು ಜೈಲಿನೊಳಗೆ ತಲುಪುವುದನ್ನು ತಡೆಯಬೇಕೆಂದು ಅಶೋಕ್ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.