ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಭಯೋತ್ಪಾದಕ ದಾಳಿ ಖಂಡನೀಯ ಮತ್ತು ಹೇಯ. ಈ ಹೀನಕೃತ್ಯವನ್ನು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ.
ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಬಲಿಷ್ಠ ನಾಯಕತ್ವದಲ್ಲಿ ಕಣಿವೆ ರಾಜ್ಯದಲ್ಲಿ ಶಾಂತಿ ಮರುಸ್ಥಾಪನೆ ಆಗಿದ್ದು, ಹೇಗಾದರೂ ಅದನ್ನು ಹಾಳು ಮಾಡುವ ದುರುದ್ದೇಶದಿಂದ ಉಗ್ರರು ಈ ಕುಕೃತ್ಯ ಎಸಗಿದ್ದಾರೆ.
ಭಯೋತ್ಪಾದನೆ ಎಂದಿಗೂ ಭಾರತವನ್ನು ಅಧೀರಗೊಳಿಸುವುದಿಲ್ಲ. ಇಂತಹ ವಿನಾಶಕಾರಿ ಶಕ್ತಿಗಳ ವಿರುದ್ಧ ಹೋರಾಡುವ ಶಕ್ತಿಯನ್ನು ಭಾರತ ಹೊಂದಿದೆ.
ಅಮಾನವೀಯ ದಾಳಿಯಲ್ಲಿ ಹುತಾತ್ಮರಾದ ಎಲ್ಲರಿಗೂ ಚಿರಶಾಂತಿ ಸಿಗಲಿ ಹಾಗೂ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಗಳಿಗೆ ದಯಪಾಲಿಸಲಿ ಎಂದು ಕುಮಾರಸ್ವಾಮಿ ಅವರು ಪ್ರಾರ್ಥಿಸಿದ್ದಾರೆ.