ವಿದ್ಯುತ್ ಚಾಲಿತ ಕಾರು ಉತ್ಪಾದಿಸಲು ಟೆಸ್ಲಾ ಕಂಪನಿ ಆಸಕ್ತಿ ಹೊಂದಿಲ್ಲ- ಕೇಂದ್ರ ಸಚಿವ ಕುಮಾರಸ್ವಾಮಿ

News Desk

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಭಾರತದಲ್ಲಿ ಕಾರುಗಳನ್ನು ಉತ್ಪಾದಿಸಲು ಟೆಸ್ಲಾ ಆಸಕ್ತಿ ಹೊಂದಿಲ್ಲ. ಆದರೆ ದೇಶದಲ್ಲಿ ಶೋ ರೂಂಗಳನ್ನು ಆರಂಭಿಸಲು ಜಾಗತಿಕ ವಿದ್ಯುತ್ ಚಾಲಿತ ವಾಹನ ದೈತ್ಯ ಟೆಸ್ಲಾ ಕಂಪನಿ ಉತ್ಸುಕವಾಗಿದೆ ಎಂದು ಕೇಂದ್ರ ಭಾರೀ ಕೈಗಾರಿಕಾ ಸಚಿವ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

- Advertisement - 

ಅವರು ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿ, ಟೆಸ್ಲಾ ಕಂಪನಿಯು ಸುಂಕ ತಪ್ಪಿಸಲು ಭಾರತದಲ್ಲಿ ಕಾರ್ಖಾನೆ ಸ್ಥಾಪಿಸಿದರೆ ಅಮೆರಿಕಕ್ಕೆ ಅನ್ಯಾಯ ಮಾಡಿದಂತೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದರು.

- Advertisement - 

ಭಾರತದಲ್ಲಿ ಟೆಸ್ಲಾ ಕಂಪನಿ ಶೋ ರೂಂಗಳನ್ನು ಪ್ರಾರಂಭಿಸಲು ಆಸಕ್ತಿ ಹೊಂದಿದೆ. ಅವರು ಭಾರತದಲ್ಲಿ ಉತ್ಪಾದನೆ ಆರಂಭಿಸಲು ಆಸಕ್ತಿ ಹೊಂದಿಲ್ಲ ಎಂದು ಕುಮಾರಸ್ವಾಮಿ ದೆಹಲಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆ ಉತ್ತೇಜಿಸುವ ಯೋಜನೆಯ ಮಾರ್ಗಸೂಚಿಗಳನ್ನು ಅನಾವರಣಗೊಳಿಸುವುದಾಗಿ ಘೋಷಿಸಲು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಕುಮಾರಸ್ವಾಮಿ ಈ ಹೇಳಿಕೆ ನೀಡಿದ್ದಾರೆ.

ಇಲ್ಲಿಯವರೆಗೆ ಟೆಸ್ಲಾ ಕಂಪನಿ ಆಸಕ್ತಿ ತೋರಿಸಿಲ್ಲ. ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಉತ್ಪಾದನೆಯನ್ನು ಉತ್ತೇಜಿಸುವ ಯೋಜನೆಗಾಗಿ ಟೆಸ್ಲಾ ಪ್ರತಿನಿಧಿಯು ಮೊದಲ ಸುತ್ತಿನ ಪಾಲುದಾರರ ಚರ್ಚೆಗಳಲ್ಲಿ ಮಾತ್ರ ಭಾಗವಹಿಸಿದ್ದಾರೆ. ಕಂಪನಿಯ ಪ್ರತಿನಿಧಿಯು ಪಾಲುದಾರರ ಎರಡನೇ ಮತ್ತು ಮೂರನೇ ಸುತ್ತಿನ ಚರ್ಚೆಗಳಲ್ಲಿ ಭಾಗವಹಿಸಿಲ್ಲ ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

- Advertisement - 

Share This Article
error: Content is protected !!
";