ಕೆ.ಶಂಭುಲಿಂಗ ಅವರ ಚಿಕಿತ್ಸೆಗೆ 5ಲಕ್ಷ ರೂ ನೆರವು ನೀಡಿದ ಡಾ.ವಿಜಯ ಸಂಕೇಶ್ವರ ಅವರಿಗೆ ಧನ್ಯವಾದಗಳು

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಕೆ.ಶಂಭುಲಿಂಗ ಅವರ ತುರ್ತು ಚಿಕಿತ್ಸೆಗೆ VRL ಸಮೂಹ ಸಂಸ್ಥೆ ಛೇರ್ಮನ್ ಡಾ.ವಿಜಯ ಸಂಕೇಶ್ವರ ಅವರು ನೆರವಿನ ಹಸ್ತ ಚಾಚಿದ್ದಾರೆ.

ಪತ್ರಿಕಾ ವಿತರಕರ ಸಂಘಟನೆಗಾಗಿ ಅವಿರತವಾಗಿ ದುಡಿದ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಅವರು ತೀವ್ರ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿದ್ದಾರೆ. ಈಗಾಗಲೇ 16ಲಕ್ಷಕ್ಕೂ ಹೆಚ್ಚು ವೆಚ್ಚವಾಗಿದ್ದು, ಇನ್ನೂ 20 ಲಕ್ಷ ಅಗತ್ಯವಿದೆ. ಈ ಸಂಕಷ್ಟದ ಹೊತ್ತಿನಲ್ಲಿ ಚಿಕಿತ್ಸಾವೆಚ್ಚಕ್ಕೆ VRL ಸಮೂಹ ಸಂಸ್ಥೆ ಛೇರ್ಮನ್ ಡಾ.ವಿಜಯ ಸಂಕೇಶ್ವರ ಅವರು 5ಲಕ್ಷ ರೂ ನೆರವು ನೀಡಿದ್ದಾರೆ.

- Advertisement - 

ಉದಾರತೆಯಿಂದ ನೆರವು ನೀಡಿದ VRL ಸಮೂಹ ಸಂಸ್ಥೆ ಛೇರ್ಮನ್ ಡಾ.ವಿಜಯ ಸಂಕೇಶ್ವರ ಅವರು ಮತ್ತು ಎಂಡಿ ಆನಂದ ಸಂಕೇಶ್ವರ ಅವರಿಗೆ ವಿತರಕರು ಮತ್ತು ಪತ್ರಕರ್ತರ ಪರವಾಗಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

- Advertisement - 

 

 

 

Share This Article
error: Content is protected !!
";