ಮಹಿಳಾ ಅಭಿವೃದ್ಧಿಯಿಂದ ದೇಶ ಮತ್ತು ಸಮಾಜದ ಪ್ರಗತಿ ಸಾಧ್ಯ: ರಾಜ್ಯಪಾಲ ಥಾವರ್ ಚಂದ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಯಾವುದೇ ದೇಶ ಮತ್ತು ಸಮಾಜದ ಅಭಿವೃದ್ಧಿಯು ಮಹಿಳೆಯರ ಅಭಿವೃದ್ಧಿಗೆ ನೇರವಾಗಿ ಸಂಬಂಧಿಸಿದೆ; ಮಹಿಳೆಯರಿಲ್ಲದೆ ವ್ಯಕ್ತಿಗಳು, ಕುಟುಂಬಗಳು ಮತ್ತು ಸಮಾಜದ ಅಭಿವೃದ್ಧಿಯನ್ನು ಊಹಿಸಲೂ ಸಾಧ್ಯವಿಲ್ಲ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.

ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಎರಡು ಮತ್ತು ಮೂರನೇ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಕ್ಷಣವು ಜಗತ್ತನ್ನು ಬದಲಾಯಿಸಬಹುದಾದ ಅತ್ಯಂತ ಶಕ್ತಿಶಾಲಿ ಅಸ್ತ್ರವಾಗಿದೆ ಮತ್ತು ಅದು ಮಹಿಳೆಯರನ್ನು ಸಬಲೀಕರಣಗೊಳಿಸಿದಾಗ, ಅದು ಪ್ರಗತಿಪರ ಸಮಾಜ ಮತ್ತು ಬಲವಾದ ರಾಷ್ಟ್ರಕ್ಕೆ ಅಡಿಪಾಯ ಹಾಕಿದಂತಾಗುತ್ತದೆಎಂದರು.

- Advertisement - 

ಭಾರತವು ತನ್ನ ಇತಿಹಾಸ ಮತ್ತು ಸಂಸ್ಕøತಿಯಿಂದಾಗಿ ವಿಶ್ವದಲ್ಲಿ ವಿಶೇಷ ಸ್ಥಾನವನ್ನು ಹೊಂದಿದೆ. ನಮ್ಮ ದೇಶವು ಸಾಂಸ್ಕøತಿಕ, ಪ್ರಜಾಪ್ರಭುತ್ವ, ಆರ್ಥಿಕ ಮತ್ತು ಮಿಲಿಟರಿ ಶಕ್ತಿಯಲ್ಲಿ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಒಂದಾಗಿದೆ. ಭಾರತೀಯ ಇತಿಹಾಸದಲ್ಲಿ ಮತ್ತು ನಮ್ಮ ಧರ್ಮಗ್ರಂಥಗಳು ಮತ್ತು ಪುರಾಣಗಳಲ್ಲಿ ಮಹಿಳೆಯರಿಗೆ ನೀಡಲಾಗುವ ಗೌರವದ ಉಲ್ಲೇಖವಿದೆ.

ಸಂವಿಧಾನವು ಮಹಿಳೆಯರಿಗೆ ಸಮಾನ ಸ್ಥಾನಮಾನವನ್ನು ಒದಗಿಸುತ್ತದೆ ಮತ್ತು ಮಹಿಳೆಯರ ಪರವಾಗಿ ದೃಢವಾದ ಕ್ರಮಗಳನ್ನು ತೆಗೆದುಕೊಳ್ಳಲು ರಾಜ್ಯಗಳಿಗೆ ಅಧಿಕಾರ ನೀಡುತ್ತದೆ. ಯಾವುದೇ ದೇಶ ಪ್ರಗತಿಯತ್ತಾ ಮುನ್ನಡೆಯುತ್ತಿದ್ದರೆ, ಅದರಲ್ಲಿ ಮಹಿಳೆಯರ ಪಾತ್ರ ಅಪಾರ. ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ನೀಡಲು ಮತ್ತು ಸಮಾಜ ಮತ್ತು ರಾಜಕೀಯದಲ್ಲಿ ಅವರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಮಹಿಳಾ ಮೀಸಲಾತಿಗೆ ಅವಕಾಶಗಳನ್ನು ಮಾಡಲಾಗಿದೆ ಎಂದು ತಿಳಿಸಿದರು.

- Advertisement - 

ಪ್ರಸ್ತುತ ಮಹಿಳೆಯರು ವೈದ್ಯಕೀಯ, ಎಂಜಿನಿಯರಿಂಗ್, ಶಿಕ್ಷಣ, ಭದ್ರತೆ ಮುಂತಾದ ಎಲ್ಲಾ ಕ್ಷೇತ್ರಗಳಲ್ಲಿ ತಮ್ಮ ಹೆಸರನ್ನು ಬೆಳಗಿಸುತ್ತಿದ್ದಾರೆ ಮತ್ತು ದೇಶ ಮತ್ತು ಸಮಾಜದ ಅಭಿವೃದ್ಧಿಯಲ್ಲಿ ತಮ್ಮ ಪ್ರಮುಖ ಕೊಡುಗೆಯನ್ನು ನೀಡುತ್ತಿದ್ದಾರೆ. ಭಾರತದ ಸ್ವಾತಂತ್ರ್ಯ ಮತ್ತು ನಂತರದ ಪ್ರಗತಿಯಲ್ಲಿ ಮಹಿಳೆಯರು ಮಹತ್ವದ ಪಾತ್ರ ವಹಿಸಿದ್ದಾರೆ. ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವಲ್ಲಿ ಮತ್ತು ಪರಿಸರವನ್ನು ರಕ್ಷಿಸುವಲ್ಲಿ ಮತ್ತು ಹೆಚ್ಚಿಸುವಲ್ಲಿ ನಿಮ್ಮ ಪಾತ್ರ ಮತ್ತು ಭಾಗವಹಿಸುವಿಕೆ ನಿರ್ಣಾಯಕವಾಗಿರುತ್ತದೆ ಎಂದು ಹೇಳಿದರು.

ಮಹಾರಾಣಿ ಕಾಲೇಜಿನ ಅದ್ಭುತ ಪರಂಪರೆಯೊಂದಿಗೆ ಸಂಬಂಧ ಹೊಂದಿರುವ ಈ ವಿಶ್ವವಿದ್ಯಾಲಯವು ಮಹಿಳಾ ಶಿಕ್ಷಣ ಕ್ಷೇತ್ರದಲ್ಲಿ ದಾರಿದೀಪವಾಗಿ ನಿಂತಿದೆ. ಇಲ್ಲಿನ ವಿದ್ಯಾರ್ಥಿನಿಯರು ನಾರಿ ಶಕ್ತಿಯ ಸಂಕೇತ. ಪದವಿ ಪಡೆದ ಎಲ್ಲಾ ವಿದ್ಯಾರ್ಥಿನಿಯರು ಭಾರತದ ಭವಿಷ್ಯವನ್ನು ರೂಪಿಸಲು ಸಿದ್ಧರಿದ್ದೀರಿ ಎಂದು ಭಾವಿಸುತ್ತೇನೆ. ನಿಮ್ಮ ಜೀವನದ ಒಂದು ಅಧ್ಯಾಯದ ಅಂತ್ಯ ಮತ್ತು ಸಾಧ್ಯತೆಗಳಿಂದ ತುಂಬಿರುವ ಹೊಸದೊಂದು ಆರಂಭವನ್ನು ಸೂಚಿಸುತ್ತದೆ.

ಈ ವಿಶ್ವವಿದ್ಯಾಲಯದಲ್ಲಿ ಸಂಪಾದಿಸಿರುವ ಜ್ಞಾನ ಮತ್ತು ಕೌಶಲ್ಯಗಳು ಕೇವಲ ಪದವಿ ಅಥವಾ ಉದ್ಯೋಗಕ್ಕೆ ಒಂದು ಸಾಧನವಲ್ಲ, ಬದಲಾಗಿ ಸಮಾಜಕ್ಕೆ ಹೆಚ್ಚಿನ ಜವಾಬ್ದಾರಿಯನ್ನು ಸಹ ನೀಡುತ್ತವೆ. ಪದವಿಯ ಜೊತೆಗೆ ಹೊಸ ಗುರುತನ್ನು ಪಡೆದುಕೊಂಡು ಇಲ್ಲಿಂದ ಹೊರಡುತ್ತಿದ್ದೀರಿ, ಅದು ನಿಮ್ಮನ್ನು ಒಬ್ಬ ಜವಾಬ್ದಾರಿಯುತ ನಾಗರಿಕನನ್ನಾಗಿ, ಭವಿಷ್ಯದ ನಿರ್ಮಾಪಕನನ್ನಾಗಿ ಮಾಡುತ್ತದೆ. ಪದವಿ ಪಡೆದ ಎಲ್ಲಾ ವಿದ್ಯಾರ್ಥಿಗಳಿಗೆ ಅವರ ಕಠಿಣ ಪರಿಶ್ರಮ, ಸಮರ್ಪಣೆ ಮತ್ತು ಬದ್ಧತೆಗಾಗಿ ಹೃತ್ಪೂರ್ವಕ ಅಭಿನಂದನೆಗಳು ಮತ್ತು ನಿಮ್ಮ ಭವಿಷ್ಯವು ಉಜ್ವಲವಾಗಿರಲಿ ಎಂದು ರಾಜ್ಯಪಾಲರು ಶುಭ ಹಾರೈಸಿದರು.

ಧರ್ಮ, ಸಂಸ್ಕೃತಿಯ ಪ್ರಚಾರ ಮತ್ತು ಸಂರಕ್ಷಣೆ ಹಾಗೂ ಸಮಾಜ ಮತ್ತು ದೇಶದ ಕಲ್ಯಾಣಕ್ಕಾಗಿ ಅತ್ಯುತ್ತಮ ಕೆಲಸ ಮಾಡಿದ ಅಂತಹ ಮಹಾನ್ ವ್ಯಕ್ತಿಗಳಿಗೆ ವಿಶ್ವವಿದ್ಯಾಲಯವು ಗೌರವ ಪದವಿಗಳನ್ನು ನೀಡಿ ಗೌರವಿಸಿದೆ. ಈ ಗಣ್ಯರಿಗೆ ಅಭಿನಂದಿಸುತ್ತಾ, ಸಮಾಜಕ್ಕಾಗಿ ಅವರ ಸೇವೆ ನಿರಂತರವಾಗಿರಲಿ ಎಂದು ಆಶೀಸುತ್ತೇನೆ ಎಂದರು.

ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಸಬಿಹಾ ಭೂಮಿಗೌಡ, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಕುಲಪತಿ ಡಾ.ಟಿ.ಎಂ.ಮಂಜುನಾಥ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

 

Share This Article
error: Content is protected !!
";