ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನಲ್ಲಿ ನಡೆದ ಅವಘಡ ನಿಜಕ್ಕೂ ಹೃದಯವಿದ್ರಾವಕ. ಈ ದುರಂತದ ಸಮಯದಲ್ಲಿ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರಿಗೂ ನನ್ನ ಸಾಂತ್ವನಗಳು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.
ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ತಿಳಿಸಿದ್ದಾರೆ.