ವೃದ್ಧ ಮಹಿಳೆ ಕೊಂದಿದ್ದ ಆರೋಪಿ ನೇಣಿಗೆ ಶರಣು

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ನೆಲಮಂಗಲ:
ವೃದ್ಧ ಮಹಿಳೆಯನ್ನು ಕೊಡಲಿಯಿಂದ ಕೊಚ್ಚಿ ಕೊಂದಿದ್ದ ಆರೋಪಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮದಲ್ಲಿ ನಡೆದಿದೆ.

ದಾಕ್ಷಾಯಿಣಮ್ಮ(55) ಕೊಂದು ಪರಾರಿಯಾಗಿದ್ದ ವೀರಭದ್ರಯ್ಯ(60) ಆತ್ಮಹತ್ಯೆ ಮಾಡಿಕೊಂಡಿರುವ ಆರೋಪಿ. ಸದ್ಯ ಸ್ಥಳಕ್ಕೆ‌ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

- Advertisement - 

ಕಳೆದ ಶನಿವಾರದಂದು ಮಟಮಟ ಮಧ್ಯಾಹ್ನ ದಾಕ್ಷಾಯಿಣಮ್ಮನನ್ನು ಆರೋಪಿ ವೀರಭದ್ರ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ. ಘಟನೆ ಸಂಬಂಧ ನೆಲಮಂಗಲ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸರಿಂದ ಹುಡುಕಾಟ ನಡೆಸಲಾಗುತ್ತಿತ್ತು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೊಳೂರು ಗ್ರಾಮದ ಅಕ್ಕನ ಮನೆಗೆ ತಡರಾತ್ರಿ ಬಂದಿದ್ದ. ಅಕ್ಕನನ್ನ ಮಾತನಾಡಿಸಿಕೊಂಡು ತೋಟಕ್ಕೆ ಹೋದವನು ಮರಕ್ಕೆ‌ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ. ಹೊರಗಡೆ ಹೋದವನು ವಾಪಸ್ ಮನೆಗೆ ಬಾರದ ಕಾರಣ ಎಲ್ಲೆಡೆ ಹುಡುಕಾಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

- Advertisement - 

ಏನಿದು ಘಟನೆ?
ಬೆಂಗಳೂರು ವಾಯುವ್ಯ ವಿಭಾಗ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕುದುರೆಗೆರೆ ಕಾಲೋನಿಯ ನಿವಾಸಿ ದಾಕ್ಷಾಯಿಣಮ್ಮ 8 ವರ್ಷದ ಹಿಂದೆ ಪತಿ ನಾಗರಾಜ್​​​ರನ್ನು ಕಳೆದುಕೊಂಡಿದ್ದರು. ಇಬ್ಬರು ಹೆಣ್ಣು ಮಕ್ಕಳನ್ನ ಮದುವೆ ಕೂಡ ಮಾಡಿದ್ದಾರೆ. ಹಣಕಾಸಿನ ವ್ಯವಹಾರ ಹಾಗೂ ಮನೆ ಬಾಡಿಗೆ ಹಣದಲ್ಲಿ ಒಂಟಿಯಾಗಿ ಜೀವನ ನಡೆಸುತ್ತಿದ್ದರು.

ದಾಕ್ಷಾಯಿಣಮ್ಮ ಮಾವ ವೀರಭದ್ರನ ಜೊತೆ ಹಣಕಾಸಿನ ವ್ಯವಹಾರ ಹಾಗೂ ಭೂ ವ್ಯಾಜ್ಯ ಸಂಬಂಧ ಇಬ್ಬರ ಮಧ್ಯೆ ಜಗಳವಾಗಿತ್ತು. ಒಂದು ದಿನ ತಮ್ಮ ಮೊಮ್ಮಗನನ್ನು ಶಾಲೆಯಿಂದ ಕರೆತರಲು ಹೊರಟಿದ್ದಾರೆ. ಈ ವೇಳೆ ಬೈಕ್​ನಲ್ಲಿ ಬಂದ ವ್ಯಕ್ತಿ ನಡು ರಸ್ತೆಯಲ್ಲಿ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ.

ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದರು. ಅಷ್ಟೇ ಅಲ್ಲದೆ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಆರೋಪಿ ಪತ್ತೆಗೆ ಬಲೆ ಬೀಸಿದ್ದರು. ಆದರೆ ಅಷ್ಟರಲ್ಲಿ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

 

 

Share This Article
error: Content is protected !!
";