ಕಾಂಗ್ರೆಸ್ ದುರಾಡಳಿತದಿಂದ ಗ್ರಾಮ ಪಂಚಾಯಿತಿಗಳ ಆಡಳಿತ ಸ್ತಬ್ಧ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸ್ವತಃ ಮುಖ್ಯಮಂತ್ರಿಗಳ ಮುಡಾ ಹರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಣ ದುರ್ಬಳಕೆ ಸೇರಿದಂತೆ ನಿರಂತರ ಭ್ರಷ್ಟಾಚಾರದಲ್ಲಿ ಮುಳುಗಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ಯಾವೊಂದು ಸಮಸ್ಯೆಗಳು ಕೇಳಿಸುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ಮಾಡಿದ್ದಾರೆ.

ಅವರು ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು, ನೌಕರರು ಮತ್ತು ಸದಸ್ಯರು ಆರಂಭಿಸಿರುವ ಅನಿರ್ದಿಷ್ಟಾವಧಿ ಮುಷ್ಕರ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಮುಂದುವರಿದು ಮೂರನೇ ದಿನಕ್ಕೆ ಕಾಲಿಟ್ಟಿದ್ದು ರಾಜ್ಯ ಸರ್ಕಾರದ ಯಾರೊಬ್ಬರೂ ಈ ಸಂಬಂಧ ಸಮಸ್ಯೆ ಆಲಿಸದಿರುವುದು ದುರಾದೃಷ್ಟಕರ ಸಂಗತಿ.

ರಾಜ್ಯದ ಬಹುತೇಕ ಗ್ರಾಮ ಪಂಚಾಯಿತಿಗಳ ಆಡಳಿತ ಸ್ತಬ್ಧವಾಗಿದ್ದು ದಾಖಲೆಗಳ ವಿತರಣೆ, ನೀರು ಪೂರೈಕೆ ಮತ್ತು ಘನ ತ್ಯಾಜ್ಯ ವಿಲೇವಾರಿಯಲ್ಲಿ ವ್ಯತ್ಯಯ ಉಂಟಾಗಿ ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾದರೂ ಸಚಿವ ಪ್ರಿಯಾಂಕ ಖರ್ಗೆ ಈ ಕುರಿತು ಸಮಸ್ಯೆ ಆಲಿಸದೇ ಇರುವುದು ಅವರ ಮಿತಿಮೀರಿದ ಬೇಜವಾಬ್ದಾರಿತನದ ಪರಮಾವಧಿ ಅಲ್ಲದೇ ಬೇರೇನೂ ಅಲ್ಲ.

ಆಡಳಿತಕ್ಕೆ ಜಡ್ಡು ಹಿಡಿಸಿಕೊಂಡಿರುವ ಈ ಜನವಿರೋಧಿ ಭ್ರಷ್ಟ ಸರ್ಕಾರದ ವಿರುದ್ಧ ಜನಸಾಮಾನ್ಯರು ಬೀದಿಗಿಳಿಯುವ ಕಾಲ ದೂರವಿಲ್ಲ ಎಂದು ಅವರು ಟೀಕಿಸಿದ್ದಾರೆ.

 

- Advertisement -  - Advertisement -  - Advertisement - 
Share This Article
error: Content is protected !!
";