ಕರ್ನಾಟಕ ದಿವಾಳಿ ಮಾಡುವುದೇ ಕಾಂಗ್ರೆಸ್ ಸರ್ಕಾರದ ಗುರಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕವನ್ನು ಸಂಪೂರ್ಣ ದಿವಾಳಿ ಮಾಡಬೇಕೆಂಬುದೇ ಕರ್ನಾಟಕ ಕಾಂಗ್ರೆಸ್  ಸರ್ಕಾರದ ಒನ್‌ಲೈನ್‌ಅಜೆಂಡಾ!! ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಾಪ್ರಹಾರ ನಡೆಸಿದ್ದಾರೆ.

ಸಾಲ ಮಾಡುವುದನ್ನೇ ಫುಲ್‌ಟೈಂ ಕಾಯಕವನ್ನಾಗಿಸಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ಪ್ರಸ್ತುತ ಕರ್ನಾಟಕದ ಒಟ್ಟು ಸಾಲವನ್ನು 6 ಲಕ್ಷ 65 ಸಾವಿರ ಕೋಟಿಗೆ ಮುಟ್ಟಿಸಿದ್ದಾರೆ ಎಂದು ಅವರು ಹರಿಹಾಯ್ದಿದ್ದಾರೆ.

- Advertisement - 

ಪ್ರತಿ ಕನ್ನಡಿಗನ ಮೇಲೆ ಬರೋಬ್ಬರಿ 1 ಲಕ್ಷ ರೂಪಾಯಿ ಸಾಲದ ಹೊರೆಯನ್ನು ಭ್ರಷ್ಟ ಕಾಂಗ್ರೆಸ್‌ಸರ್ಕಾರ ಹೊರೆಸಿದೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ನಾವೀನ್ಯತೆಯ ಸೂಚ್ಯಂಕದಲ್ಲಿ, ಬಂಡವಾಳ ಹೂಡಿಕೆಯಲ್ಲಿ ನಂಬರ್‌1 ಆಗಿತ್ತು, ಆದರೆ ಈಗಿನ ಕಾಂಗ್ರೆಸ್‌ಸರ್ಕಾರದ ಅವಧಿಯಲ್ಲಿ ಕರ್ನಾಟಕ ಅತಿ ಹೆಚ್ಚು ಸಾಲ ಮಾಡುವ ರಾಜ್ಯಗಳಲ್ಲಿ ನಂಬರ್‌1 ಆಗುತ್ತಿರುವುದು ಅತ್ಯಂತ ನಾಚಿಕೆಗೇಡು ಎಂದು ಅಶೋಕ್ ವಾಗ್ದಾಳಿ ಮಾಡಿದ್ದಾರೆ.

 

- Advertisement - 

Share This Article
error: Content is protected !!
";