ಪೊಲೀಸರ ಭರ್ಜರಿ ಕಾರ್ಯಾಚರಣೆ ಗಾಂಜಾ ಬೆಳೆದಿದ್ದವನ ಬಂಧನ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ತಾಲ್ಲೂಕಿನ ತೂಬಗೆರೆ ಹೋಬಳಿ ರೈತರ ವ್ಯವಸಾಯದ ಜೊತೆಯಲ್ಲಿ ಮಿಶ್ರ ಬೇಸಾಯದ ಮಧ್ಯೆ ಗಾಂಜಾ ಬೆಳೆದಿದ್ದ ರೈತನನ್ನು  ಗ್ರಾಮಾಂತರ ಪೊಲೀಸರು ಖಚಿತ ಮಾಹಿತಿಯಿಂದ ಪತ್ತೆಹಚ್ಚಿದ್ದಾರೆ

   ರಾಗಿ ಹೊಲದಲ್ಲಿ ತೊಗರಿ, ಅವರೆ, ಹಲಸಂದೆ ಸಾಲುಗಳ ಮಧ್ಯೆ ಗಾಂಜಾ ಗಿಡಗಳನ್ನು ಬೆಳೆಸಿ, ಅವುಗಳಿಗೆ ಗೊಬ್ಬರ ಹಾಕಿ ಪೋಷಣೆ ಮಾಡಿ ಬೆಳೆಸಿರುವುದನ್ನು ಪತ್ತೆ ಹಚ್ಚಿದ ಗ್ರಾಮಾಂತರ ಠಾಣಾ ಪೊಲೀಸರು ಗಾಂಜಾ ಗಿಡಗಳನ್ನು ವಶಕ್ಕೆ ಪಡೆದು  ನಾರಾಯಣಸ್ವಾಮಿ ಎಂಬಾತನನ್ನು ಬಂಧಿಸಿದ್ದಾರೆ.

 ತೂಬಗೆರೆ ಹೋಬಳಿಎಸ್ ಎಸ್ ಘಾಟಿ ಪಂಚಾಯಿತಿ ವ್ಯಾಪ್ತಿಯ   ಗೆದ್ದಲಪಾಳ್ಯ ಗ್ರಾಮದ ನಿವಾಸಿ ನಾರಾಯಣಸ್ವಾಮಿ ಬಿನ್‌ಯಲ್ಲಪ್ಪ ಅವರು ಸದರಿ ಗ್ರಾಮದ ಸ.ನಂ 59 ರ ಜಮೀನಿನಲ್ಲಿ ಗಾಂಜಾ ಗಿಡಗಳನ್ನು ಬೆಳೆದಿರುತ್ತಾನೆಂದು ಬಂದ ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅದೀಕ್ಷಕರಾದ ಸಿಕೆ ಬಾಬಾ ಅವರ ಮಾರ್ಗದರ್ಶನದಲ್ಲಿ ದೊಡ್ಡಬಳ್ಳಾಪುರ ಉಪ ವಿಭಾಗದ ಉಪಾದೀಕ್ಷಕರು ಹಾಗೂ ಗ್ರಾಮಾಂತರ ಪೊಲೀಸ್ ಠಾಣಾ ಇನ್ಸ್ಪೆಕ್ಟರ್ ಸಾದಿಕ್ ಪಾಷಾ ಅವರ ನೇತೃತ್ವದಲ್ಲಿ ದಾಳಿ ನಡೆಸಿ, ಸುಮಾರು 92 ಸಾವಿರ ರೂ. ಮೌಲ್ಯದ 8 ಕೆಜಿ 700 ಗ್ರಾಂ ತೂಕದ, ಒಟ್ಟು 568 ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. 

   ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಚಂದ್ರಶೇಖರ್, ಫೈರೋಜ್ ಮುತ್ತುರಾಜು ಹರೀಶ್ ಮುಂತಾದವರು ಪಾಲ್ಗೊಂಡಿದ್ದರು.

 

 

- Advertisement -  - Advertisement - 
Share This Article
error: Content is protected !!
";