ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬ್ಯಾಟರಾಯನಪುರದಲ್ಲಿ ನಡೆದ ‘ಸಂಕ್ರಾಂತಿ ಸಂಭ್ರಮ – 2026′ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕ ಸಿ.ಟಿ ರವಿ ಅವರು ಭಾಗವಹಿಸಿ ಮಾತನಾಡಿದರು.
ಸಾವಿರಾರು ವರ್ಷಗಳಿಂದ ನಮ್ಮ ಪೂರ್ವಿಕರು ಸಂಕ್ರಾಂತಿಯನ್ನು ಆಚರಿಸುತ್ತಾ ಬಂದಿದ್ದಾರೆ. ಸಂಕ್ರಾಂತಿಯ ಶುಭ ದಿನದಿಂದ ಉತ್ತರಾಯಣ ಪುಣ್ಯಕಾಲ ಆರಂಭವಾಗುತ್ತದೆ ಎಂದು ಸಿಟಿ ರವಿ ತಿಳಿಸಿದ್ದಾರೆ.
ಎಳ್ಳುಬೆಲ್ಲ ತಿನ್ನುವ ಮೂಲಕ ಒಳ್ಳೆಯ ಮಾತಾಡೋಣ ಎಂಬ ಸಂದೇಶವನ್ನು ಸಂಕ್ರಾಂತಿ ನೀಡುತ್ತದೆ. ಸಂಕ್ರಾಂತಿಯ ಶುಭದ ಸಂದರ್ಭದಲ್ಲಿ ಭಾರತ ಶ್ರೇಷ್ಠ ಭಾರತ, ವಿಶ್ವಗುರು ಭಾರತವಾಗುವಲ್ಲಿ ನಾವೆಲ್ಲರೂ ಸಂಕಲ್ಪ ಮಾಡೋಣ ಎಂದು ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ಶಾಸಕ ಎಸ್. ಆರ್. ವಿಶ್ವನಾಥ್, ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ರವಿ ಆಂಜಿನಪ್ಪ ಸೇರಿದಂತೆ ಇನ್ನಿತರ ಗಣ್ಯರು, ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

