ಪ್ರಾಥಮಿಕ-ಪ್ರೌಢಶಾಲೆಗಳ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ, ಸೆ-5ರಂದು ಪ್ರಶಸ್ತಿ ಪ್ರದಾನ

WhatsApp
Telegram
Facebook
Twitter
LinkedIn

ಚಂದ್ರವಳ್ಳಿ ನ್ಯೂಸ್, ತುಮಕೂರು:
ಜಿಲ್ಲಾಡಳಿತ
, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್ ೫ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಕೆ.ಪಿ.ಎಸ್. ಎಂಪ್ರೆಸ್ ಬಾಲಕಿಯರ ಶಾಲಾ ಸಭಾಂಗಣದಲ್ಲಿ ಭಾರತರತ್ನ ಡಾ: ಸರ್ವಪಲ್ಲಿ ರಾಧಾಕೃಷ್ಣನ್ ಅವರ ೧೩೭ನೇ ಜನ್ಮದಿನಾಚರಣೆ ಹಾಗೂ ಶಿಕ್ಷಕರ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

        ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಸಂಸದ ವಿ.ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ  ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.

        ಸಹಕಾರ ಸಚಿವ ಕೆ.ಎನ್.ರಾಜಣ್ಣ, ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ.ಜಯಚಂದ್ರ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು, ಶಿಕ್ಷಕರ ಸಂಘದ ಪದಾಧಿಕಾರಿಗಳು, ಶಿಕ್ಷಕ ವರ್ಗದವರು ಭಾಗವಹಿಸುವರು.

ಶಿಕ್ಷಕರಿಗೆ ಸನ್ಮಾನ:-
        ಡಾ: ಸರ್ವಪಲ್ಲಿ ರಾಧಾಕೃಷ್ಣನ್ ಅವರ ೧೩೭ನೇ ಜನ್ಮದಿನಾಚರಣೆಯಂದು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಗುವುದು. 

        ಕಿರಿಯ ಪ್ರಾಥಮಿಕ ಶಾಲೆಯ ೫, ಹಿರಿಯ ಪ್ರಾಥಮಿಕ ಶಾಲೆಯ ೬ ಹಾಗೂ ಪ್ರೌಢಶಾಲೆಯ ೬ ಶಿಕ್ಷಕರನ್ನು ಜಿಲ್ಲಾ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ವಿವರ ಇಂತಿದೆ.

        ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸಹಶಿಕ್ಷಕರಾದ ಚಿಕ್ಕನಾಯಕನಹಳ್ಳಿ ತಾಲ್ಲೂಕು ಹಾಲುಗೋಣ ಶಾಲೆಯ ಸಿ.ಎಸ್.ಕೆಂಚಮ್ಮ, ಗುಬ್ಬಿ ತಾಲ್ಲೂಕು ಮಲ್ಲಪ್ಪನಹಳ್ಳಿ ಶಾಲೆಯ ವೆಂಕಟೇಶಯ್ಯ, ಕುಣಿಗಲ್ ತಾಲ್ಲೂಕು ತುರುಗನೂರು ಶಾಲೆಯ ವಿ.ರಮೇಶ್, ತಿಪಟೂರು ತಾಲ್ಲೂಕು ಹರಿಸಮುದ್ರ ಶಾಲೆಯ ಹೆಚ್.ಎಂ.ವಸಂತಕುಮಾರ್ ಹಾಗೂ ತುರುವೇಕೆರೆ ತಾಲ್ಲೂಕು ಸೂಳೆಕೆರೆ ಶಾಲೆಯ ಎಂ.ಬಿ. ಲೇಪಾಕ್ಷಮೂರ್ತಿ; ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಸಹಶಿಕ್ಷಕರಾದ ಚಿಕ್ಕನಾಯಕನಹಳ್ಳಿ ತಾಲ್ಲೂಕು ಹಳ್ಳಿಕಾರ ಬೀದಿ ಶಾಲೆಯ ಸಿ.ಎ.ಸುರೇಶ್ಗುಬ್ಬಿ ತಾಲ್ಲೂಕು ಕೊಂಡ್ಲಿ ಶಾಲೆಯ ಹೆಚ್.ಸೌಭಾಗ್ಯ, ಕುಣಿಗಲ್ ತಾಲ್ಲೂಕು ಮಾದುಗೋನಹಳ್ಳಿ ಶಾಲೆಯ ಎನ್.ಜಯಲಕ್ಷ್ಮಮ್ಮ, ತಿಪಟೂರು ತಾಲ್ಲೂಕು ನಾಗತಿಹಳ್ಳಿ ಶಾಲೆಯ ವಿ.ಎಂ. ಗಿರಿಜಮ್ಮ, ತುಮಕೂರು ತಾಲ್ಲೂಕು ಶ್ರೀರಾಮನಗರ ಶಾಲೆಯ ಟಿ.ಎಂ.ರಂಗನಾಥಯ್ಯ ಹಾಗೂ ತುರುವೇಕೆರೆ ತಾಲ್ಲೂಕು ಬಿಗನೇನಹಳ್ಳಿ ಶಾಲೆಯ ಎಂ.ಬಿ.ಚೇತನ;

ಪ್ರೌಢ ಶಾಲಾ ವಿಭಾಗದಲ್ಲಿ ಸಹಶಿಕ್ಷಕರಾದ ಚಿಕ್ಕನಾಯಕನಹಳ್ಳಿ ತಾಲ್ಲೂಕು ಶೆಟ್ಟಿ ಕೆರೆ ಸಂಯುಕ್ತ ಪದವಿಪೂರ್ವ ಕಾಲೇಜಿನ ಎಸ್.ಕೆ.ದಯಾಶಂಕರ, ಗುಬ್ಬಿ ತಾಲ್ಲೂಕು ಮಂಚಲದೊರೆ ಸರ್ಕಾರಿ ಪದವಿ ಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ) ಎನ್.ವಿಜಯಕುಮಾರಿ, ಕುಣಿಗಲ್ ತಾಲ್ಲೂಕು ಎಡೆಯೂರಿನ ಶ್ರೀ ಗೌತಮ ಅನುದಾನಿತ ಪ್ರೌಢಶಾಲೆಯ ಬಿ.ಆರ್.ಹರೀಶ್, ತಿಪಟೂರಿನ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಎನ್. ಮೂರ್ತಿ, ತುಮಕೂರು ತಾಲ್ಲೂಕು ಚಿಕ್ಕತೊಟ್ಲುಕೆರೆ ಶ್ರೀ ಅಟವಿ ಸಿದ್ಧಲಿಂಗೇಶ್ವರ ಸಂಯುಕ್ತ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಟಿ.ಎಸ್. ರವಿಶಂಕರ್ ಹಾಗೂ ತುರುವೇಕೆರೆ ತಾಲ್ಲೂಕು ಸಂಪಿಗೆಯ ಚಂಪಕ ಪ್ರೌಢಶಾಲೆಯ ಬಿ.ಎನ್.ಆಶಾಲತ ಅವರು ಜಿಲ್ಲಾ ಮಟ್ಟದ ಉತ್ತಮ  ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಹೆಚ್.ಕೆ. ಮನಮೋಹನ ತಿಳಿಸಿದ್ದಾರೆ.

  

News Desk   About Us
For Feedback - [email protected]

LATEST Post

error: Content is protected !!
WhatsApp Icon Telegram Icon