ದಿವಾಳಿ ಕಾಂಗ್ರೆಸ್ ಸರ್ಕಾರದ ಬಳಿ ಸಿಬ್ಬಂದಿಗೆ ಸಂಬಳ ಕೊಡಲೂ ದುಡ್ಡಿಲ್ಲ!

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದಿವಾಳಿ ಕಾಂಗ್ರೆಸ್ ಸರ್ಕಾರದ ಬಳಿ ಸರ್ಕಾರದ ಸಿಬ್ಬಂದಿಗೆ ಸಂಬಳ ಕೊಡಲೂ ದುಡ್ಡಿಲ್ಲ! ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದರು.

ಜಟ್ಟಿ ಕೆಳಗೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಎಂಬಂತೆ ರಾಜ್ಯ ಸರ್ಕಾರ ಸಂಪೂರ್ಣವಾಗಿ ದಿವಾಳಿ ಆಗಿದ್ದರೂ, ಸರ್ಕಾರದ ಖಜಾನೆ ಖಾಲಿ ಆಗಿ ಪಾಪರ್ ಆಗಿದ್ದರೂ ಎಲ್ಲವೂ ಚೆನ್ನಾಗಿದೆ ಎಂದು ಬೊಗಳೆ ಬಿಟ್ಟುಕೊಂಡು ಓಡಾಡುತ್ತಿರುವ ಭಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ನವರೇ,

- Advertisement - 

ಎಲ್ಲವೂ ಸರಿ ಇದ್ದಿದ್ದರೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಜಲಸಂಪನ್ಮೂಲ ಇಲಾಖೆ ಸೇರಿದಂತೆ ಒಟ್ಟು 1,17,884 ರಾಜ್ಯ ಸರ್ಕಾರಿ ನೌಕರರಿಗೆ ಕಳೆದ ಮೂರು ತಿಂಗಳಿಂದ 834.9 ಕೋಟಿ ಮೊತ್ತದ ಸಂಬಳ ಕೊಟ್ಟಿಲ್ಲವಲ್ಲ ಯಾಕೆ?

ಇನ್ನೆಷ್ಟು ದಿನ ಈ ಸುಳ್ಳು, ಭಂಡತನದ ಬಾಳು. ರಾಜೀನಾಮೆ ಕೊಟ್ಟು ಕರ್ನಾಟಕವನ್ನು ಉಳಿಸಿ ಎಂದು ಅಶೋಕ್ ಆಗ್ರಹ ಮಾಡಿದ್ದಾರೆ.

- Advertisement - 

 

Share This Article
error: Content is protected !!
";