ದಲಿತ ನಾಯಕರ ಮೇಲೆ ಹಲ್ಲೆ, ಕಾಂಗ್ರೆಸ್ ಗೂಂಡಾಗಳ ವರ್ತನೆ ಖಂಡನೀಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದಲಿತ ನಾಯಕರ ವಿರುದ್ಧದ ಹಲ್ಲೆ ಯತ್ನ ಖಂಡಿಸಿ ಕಲಬುರ್ಗಿ ಚಲೋ” ಚಿತ್ತಾಪುರದಲ್ಲಿ ಇತ್ತೀಚೆಗೆ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿಯವರು ಪ್ರವಾಸ ಕೈಗೊಂಡ ಸಂದರ್ಭದಲ್ಲಿ ನಾಲ್ಕೈದು ತಾಸುಗಳು ಕೂಡಿಹಾಕಿ, ಹಲ್ಲೆ ನಡೆಸುವ ಯತ್ನ ನಡೆಸಿರುವ ಸಚಿವರ ಬೆಂಬಲಿಗರು ಹಾಗೂ ಕಾಂಗ್ರೆಸ್ ಗೂಂಡಾಗಳ ವರ್ತನೆಗಳನ್ನು ಖಂಡಿಸಿ ಕಲ್ಬುರ್ಗಿ ಚಲೋ ಬೃಹತ್ ಪ್ರತಿಭಟನೆ ನಡೆಸಲಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.

- Advertisement - 

ಟೀಕೆ- ಟಿಪ್ಪಣಿಗಳನ್ನು ಆರೋಗ್ಯಕರ ಮನಸ್ಸಿನಿಂದ ಸ್ವೀಕರಿಸಬೇಕು, ಅದಕ್ಕೆ ಸಮರ್ಥವಾಗಿ ಪ್ರತ್ಯುತ್ತರ ನೀಡಬೇಕು ಅದನ್ನು ಬಿಟ್ಟು ಮತ್ತೊಬ್ಬ ದಲಿತ ನಾಯಕರ ಬೆಳವಣಿಗೆ ಸಹಿಸದೇ ಬೆಂಬಲಿಗರು ಹಾಗೂ ಗೂಂಡಾಗಳ ಮೂಲಕ ವಿರೋಧ ಪಕ್ಷ ನಾಯಕರನ್ನೇ ಬೆದರಿಸಿರುವುದು ಸಾಂವಿಧಾನಿಕ ಹುದ್ದೆಯ ಘನತೆಗೆ ಅಪಮಾನಿಸಿದ್ದಾರೆ. ಅಲ್ಲದೇ ಪೊಲೀಸರು ವಿಪಕ್ಷದ ನಾಯಕರೊಬ್ಬರಿಗೆ ರಕ್ಷಣೆ ನೀಡಲಾರದ ಪರಿಸ್ಥಿತಿ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತಿದೆ. ಈ ಕೂಡಲೇ ಸಚಿವರನ್ನು ವಜಾಗೊಳಿಸಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಕ್ರಮ ವಹಿಸಬೇಕು ಎಂದು ಬಿಜೆಪಿ ನಾಯಕರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

- Advertisement - 

ಈ ಸಂದರ್ಭದಲ್ಲಿ ವಿಧಾನಸಭಾ ವಿರೋಧ ಪಕ್ಷ ನಾಯಕ ಆರ್.ಅಶೋಕ್,  ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್, ಮಾಜಿ ಸಚಿವರಾದ  ಬಿ.ಶ್ರೀರಾಮುಲು, ಸಿ.ಟಿ ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ, ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹೆಚ್.ಪೂಂಜಾ, ಶಾಸಕರು ಹಾಗೂ ಎಸ್.ಸಿ.ಮೋರ್ಚಾ ರಾಜ್ಯಾಧ್ಯಕ್ಷ ಸಿಮೆಂಟ್ ಮಂಜು, ಶಾಸಕರಾದ ಸಿದ್ದು ಸವದಿ, ಶಶಿಲ್ ನಮೋಶಿ, ಬಿ.ಜಿ.ಪಾಟೀಲ್, ಬಸವರಾಜ್ ಮತ್ತಿಮಡು,  ಅವಿನಾಶ್ ಜಾಧವ್, ಮಾಜಿ ಸಂಸದ ಮುನಿಸ್ವಾಮಿ, ಮಾಜಿ ಶಾಸಕರಾದ  ರಾಜಕುಮಾರ ಪಾಟೀಲ್ ತೆಲ್ಕೂರ್, ದತ್ತಾತ್ರೇಯ ಪಾಟೀಲ್ ರೇವೂರ,  ಬಸವರಾಜ ದಡೇಸುಗೂರು, ರಾಜ್ಯ ಕಾರ್ಯದರ್ಶಿ ಕು ಲಲಿತಾ ಅನಪೂರ್, ಜಿಲ್ಲಾಧ್ಯಕ್ಷರಾದ ಚಂದು ಪಾಟೀಲ್, ಅಶೋಕ್ ಬಗಲಿ ಸೇರಿದಂತೆ ಜಿಲ್ಲೆಯ ಪಧಾಧಿಕಾರಿಗಳು, ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement - 
Share This Article
error: Content is protected !!
";