ಉಪಾಧ್ಯಾಯರ ತ್ಯಾಗ, ಪರಿಶ್ರಮದ ಫಲವೇ ಬಿಜೆಪಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪಂಡಿತ್ ದೀನದಯಾಳ್ ಉಪಾಧ್ಯಾಯರ ತ್ಯಾಗ, ಪರಿಶ್ರಮದ ಬೆವರಿನ ಫಲವೇ ಬಿಜೆಪಿ” ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.

ದೇಶಕ್ಕಾಗಿ ತಮ್ಮ ಬದುಕನ್ನು ಸಮರ್ಪಿಸಿದ ಧೀಮಂತ ಚೇತನ, ಮಹಾನ್ ದೇಶಭಕ್ತ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜಯಂತಿಯ ಅಂಗವಾಗಿ ಪಕ್ಷದ ರಾಜ್ಯ ಕಾರ್ಯಾಲಯದಲ್ಲಿ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆ ಜಾಗೃತಿ ಮೂಡಿಸಲಾಯಿತು. ನಂತರ ಆಯೋಜಿಸಲಾಗಿದ್ದ ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನದ ಉದ್ಘಾಟನೆ ಹಾಗೂ ಲಾಂಛನ ಬಿಡುಗಡೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಾಯಿತು. ಇದೇ ವೇಳೆ ಇಹಲೋಕ ತ್ಯಜಿಸಿದ ಅದ್ವಿತೀಯ ಸಾಹಿತಿ ಡಾ.ಎಸ್.ಎಲ್ ಭೈರಪ್ಪನವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

- Advertisement - 

ಭಾರತೀಯತೆ ಉಳಿಸಲು ಹಾಗೂ ಸಮೃದ್ಧ ಭಾರತವನ್ನು ಕಟ್ಟುವ ಉದಾತ್ತ ಧ್ಯೇಯ ಹೊತ್ತು ಜನ್ಮತಾಳಿದ ರಾಜಕೀಯ ಪಕ್ಷ ಬಿಜೆಪಿ ಇಂದು ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಗಲು ಕಾರಣರಾದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರು, ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ತ್ಯಾಗ ಬಲಿದಾನವನ್ನು ಸ್ಮರಿಸಲಾಯಿತಲ್ಲದೇ, ಪಂಡಿತ್ ದೀನದಯಾಳ್ ಉಪಾಧ್ಯಾಯರ ಚಿಂತನೆ, ಅವರ ಪುಸ್ತಕಗಳು, ಭಾಷಣಗಳು ನಮಗೆ ಸದಾ ಮಾರ್ಗದರ್ಶನದ ಜ್ಯೋತಿಯಾಗಿವೆ. ಅವರ ಆದರ್ಶದ ಜ್ಯೋತಿಯ ಬೆಳಕಲ್ಲಿ ಭಾರತವನ್ನು ಕಟ್ಟಬೇಕು, ಭಾರತಕ್ಕೆ ತಡೆಯೋಡ್ಡುವ ಶಕ್ತಿಗಳನ್ನು ಮೂಲೋತ್ಪಾಟನೆ ಮಾಡುವ ಸಂಕಲ್ಪ ಮಾಡಬೇಕೆಂಬ ವಿಜಯೇಂದ್ರ ಕರೆ ನೀಡಿಜರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್, ಅಭಿಯಾನದ ಸಂಚಾಲಕರು ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಶಾಸಕರು ಹಾಗೂ ರಾಜ್ಯ ಕಾರ್ಯದರ್ಶಿ b.mattimadu,

- Advertisement - 

ಶಾಸಕರಾದ ಸಿದ್ದು ಪಾಟೀಲ್, ಭಾಗೀರಥಿ ಮುರುಳ್ಯ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ರಾಜ್ಯ ಕಾರ್ಯದರ್ಶಿ ಶರಣು ತಳ್ಳೀಕೆರೆ, ಲಕ್ಷ್ಮೀ ಅಶ್ವಿನ್ ಗೌಡ, ಜಿಲ್ಲಾಧ್ಯಕ್ಷ ಎಸ್. ಹರೀಶ್, ಸಪ್ತಗಿರಿ ಗೌಡ, ಅಭಿಯಾನದ ಸಹ ಸಂಚಾಲಕ ರಾಘವೇಂದ್ರ ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

 

 

 

Share This Article
error: Content is protected !!
";