ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಬಿಜೆಪಿ ಜನಾಕ್ರೋಶ ಏನಿದ್ದರೂ ಕೇಂದ್ರ ಸರ್ಕಾರದ ವಿರುದ್ಧ ಇರಬೇಕು! ಎಂದು ಡಿಸಿಎಂ ಡಿ ಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
ಬೆಲೆ ಏರಿಕೆಯಿಂದ ಜನರನ್ನು ರಕ್ಷಿಸಲು ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದೆ. ಅನೇಕ ಅಭಿವೃದ್ಧಿ ಯೋಜನೆಗಳನ್ನು ಕಾರ್ಯಗತಗೊಳಿಸಿದ್ದೇವೆ.
ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆದ ಬೆಲೆ ಏರಿಕೆ ವಿರೋಧಿಸಿ ಹಾಗೂ ಸಂವಿಧಾನ ರಕ್ಷಣೆಗೆ ನಡೆದ ಪ್ರತಿಭಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕ್ಷಣಗಳು ಎಂದು ಡಿಸಿಎಂ ತಿಳಿಸಿದ್ದಾರೆ.