ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಡವರ ಅಕ್ಕಿಯಲ್ಲೂ ಭ್ರಷ್ಟಾಚಾರ ಬಿಡದ ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರ! ವಿಪಕ್ಷ ನಾಯಕ ಆರ್.ಅಶೋಕ್ ಟೀಕಾಪ್ರಹಾರ ಮಾಡಿದ್ದಾರೆ.
ಬಡವರಿಗೆ ಸಿಗಬೇಕಾದ ಪಡಿತರ ಅಕ್ಕಿ ದುಬೈ, ಸಿಂಗಾಪುರ, ಫ್ರಾನ್ಸ್ ಸೇರಿದಂತೆ ವಿದೇಶಗಳಿಗೆ ಕಳ್ಳಸಾಗಣೆ ಆಗುತ್ತಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದ್ದು, ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ, ಅವ್ಯವಹಾರ, ಅಕ್ರಮ, ಲಂಚಗುಳಿತನ, ಕಮಿಷನ್ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ ಎನ್ನುವುದಕ್ಕೆ ಮತ್ತೊಂದು ತಾಜಾ ನಿದರ್ಶನವಾಗಿದೆ.
ಮುಖ್ಯಮಂತ್ರಿಗಳಾದಿಯಾಗಿ, ಸಚಿವರು, ಶಾಸಕರು ಎಲ್ಲರೂ ಭ್ರಷ್ಟಾಚಾರದಲ್ಲಿ ಮುಳುಗಿರುವಾಗ ಕಾಳಸಂತೆ ಮಾರಾಟಗಾರರಿಗೆ ಕೇಳುವವರೇ ಇಲ್ಲದಂತಾಗಿದೆ. ಕಾನೂನಿನ ಭಯವೇ ಇಲ್ಲವಾಗಿದೆ.
ಇದಕ್ಕಾಗಿಯೇ ಇರಬೇಕು, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ ಅವರು ಕರ್ನಾಟಕ ಕಾಂಗ್ರೆಸ್. ಆಡಳಿತದಲ್ಲಿ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂಬರ್ 1 ಸ್ಥಾನ ಪಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ನವರಿಗೆ ಸರ್ಟಿಫಿಕೇಟ್ ನೀಡಿದ್ದು ಎಂದು ಅಶೋಕ್ ದೂರಿದ್ದಾರೆ.

