ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 308 ರಲ್ಲಿ ದತ್ತವಾಗಿರುವ ಅಧಿಕಾರದ ಮೇರೆಗೆ, ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯಿತಿಗಳ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ನಿಗದಿಪಡಿಸಿ ಆದೇಶಿಸಿದೆ.
ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನಾಂಕ :08.05.2025 (ಗುರುವಾರ), ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 14.05.2025 (ಬುಧವಾರ), ನಾಮಪತ್ರಗಳನ್ನು ಪರಿಶೀಲಿಸುವ ದಿನಾಂಕ 15.05.2025 (ಗುರುವಾರ), ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ 17.05.2025 (ಶನಿವಾರ), ಮತದಾನವನ್ನು ನಡೆಸಬೇಕಾದ ದಿನಾಂಕ 25-05-2025 (ಭಾನುವಾರ) ಬೆಳಿಗ್ಗೆ 7-00 ಗಂಟೆಯಿಂದ ಸಂಜೆ 5-00 ಗಂಟೆಯವರೆಗೆ),
ಮತದಾನ ಅವಶ್ಯವಿದ್ದರೆ ಮತದಾನ ನಡೆಸಬೇಕಾದ ದಿನಾಂಕ : 27-05-2025 (ಮಂಗಳವಾರ) ಬೆಳಿಗ್ಗೆ 7-00 ಗಂಟೆಯಿಂದ ಸಂಜೆ 5-00 ಗಂಟೆಯವರೆಗೆ), ಮತ ಎಣಿಕೆ ದಿನಾಂಕ 28-05-2025 ಬೆಳಿಗ್ಗೆ 8.00 ಗಂಟೆಯಿಂದ ಸಂಬಂಧಿಸಿದ ತಾಲೂಕು ಕೇಂದ್ರಗಳಲ್ಲಿ, ಚುನಾವಣೆಯನ್ನು ಯಾವ ದಿನಾಂಕಕ್ಕೆ ಮುಂಚೆ ಮುಕ್ತಾಯಗೊಳಿಸಬೇಕೋ ಆ ದಿನಾಂಕ: 28.05.2025 (ಬುಧವಾರ)
ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ದಿನಾಂಕ: 08.05.2025 ರಿಂದ ದಿನಾಂಕ:28.5.2025 ರವರೆಗೆ ಜಾರಿಯಲ್ಲಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.