ಚಂದ್ರವಳ್ಳಿ ನ್ಯೂಸ್, ಮೊಳಕಾಲ್ಮೂರು:
ತಾಲೂಕಿನ ರಾಯಾಪುರ-ಮ್ಯಾಸರಹಟ್ಟಿ ಗ್ರಾಮ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ೭ ಮಂದಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.
ಈ ಘಟನೆಯಲ್ಲಿ ಪ್ರವೀಣ್ ಕುಮಾರ್, ಶ್ರೀನಿವಾಸ್, ನಿರಂಜನ್, ಶುಭ, ಕವಿತಾ, ರಾಜೇಶ್ವರಿ ಹಾಗೂ ವರ್ಷ ಒಟ್ಟು ೭ ಮಂದಿ ಗಾಯಗೊಂಡಿದ್ದು, ಇವರು ದಾವಣಗೆರೆ ಮೂಲದವರೆಂದು ಗುರುತಿಸಲಾಗಿದೆ.
ಅಪಘಾತಕ್ಕೀಡಾದ ಕಾರಿನಲ್ಲಿದ್ದವರು ಮಂತ್ರಾಲಯಕ್ಕೆ ಹೋಗಿ ರಾಯರ ದರ್ಶನ ಮುಗಿಸಿಕೊಂಡು ವಾಪಸ್ ದಾವಣಗೆರೆ ಕಡೆ ಹೋಗುವ ಬಳ್ಳಾರಿ – ಚಳ್ಳಕೆರೆ ಮಾರ್ಗಮಧ್ಯದ ತಾಲೂಕಿನ ರಾಯಾಪುರ-ಮ್ಯಾಸರಹಟ್ಟಿ ಗ್ರಾಮ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಬಿದ್ದಿದೆ.
ಈ ಘಟನೆಯಲ್ಲಿ ಓರ್ವನು ಗಂಭೀರವಾಗಿ ಗಾಯಗೊಂಡಿದ್ದಾನೆಂದು ತಿಳಿದು ಬಂದಿದೆ. ಗಾಯಗೊಂಡವರನ್ನು ೧೦೮ ತುರ್ತು ವಾಹನದಿಂದ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಕರೆದೋಯ್ದು ಚಿಕಿತ್ಸೆ ನೀಡಲಾಗಿದೆ. ಘಟನಾ ಸ್ಥಳಕ್ಕೆ ಕ್ರೈಂ ಪಿ.ಎಸ್.ಐ. ಈರೇಶ್ ಹಾಗೂ ಪೊಲೀಸ್ ಸಿಬ್ಬಂದಿಗಳು ಧಾವಿಸಿ ಪರಿಶೀಲಿಸಿ ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.