ರೈತರ ಬೇಡಿಕೆಗೆ ತಕ್ಕಂತೆ ಕೇಂದ್ರ ಸರ್ಕಾರ ರಸಗೊಬ್ಬರ ಪೂರೈಸಿಲ್ಲ-ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಬೇಡಿಕೆಗೆ ಅನುಗುಣವಾಗಿ ಕೇಂದ್ರ ಸರ್ಕಾರ ರಸಗೊಬ್ಬರ ಪೂರೈಕೆ ಮಾಡಿಲ್ಲ. ಈ ಬಗ್ಗೆ ಪತ್ರ ಬರೆದು ಮನವಿಯನ್ನು ಸಹ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
ಕೇಂದ್ರದಿಂದ 6.82 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬರಬೇಕಿತ್ತು
, ಆದರೆ ನಮಗೆ ಪೂರೈಕೆಯಾಗಿರುವುದು 5.27 ಲಕ್ಷ ಮೆಟ್ರಿಕ್ ಟನ್.

ರಸಗೊಬ್ಬರ ಉತ್ಪಾದನೆ ಮಾಡುವವರು ನಾವಲ್ಲ, ರಸಗೊಬ್ಬರ ಸರಬರಾಜು ಮಾಡುವವರು ನಾವಲ್ಲ. ಬಿಜೆಪಿ ಪಕ್ಷವೇ ಆಡಳಿತದಲ್ಲಿರುವ ಹರಿಯಾಣ, ಮಧ್ಯ ಪ್ರದೇಶ ರಾಜ್ಯಗಳಲ್ಲಿಯೂ ರಸಗೊಬ್ಬರ ಕೊರತೆ ಇದೆ. ಇದಕ್ಕೆ ಕೇಂದ್ರ ಸರ್ಕಾರವೇ ಹೊಣೆ ಎಂದು ಸಿಎಂ ಆರೋಪಿಸಿದರು.

- Advertisement - 

 ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ರಸಗೊಬ್ಬರ ಕೇಳಿದ ರೈತರನ್ನು ಗುಂಡಿಕ್ಕಿ ಕೊಂದಿದ್ದರು. ನಾವು ಅವರಂತಲ್ಲ.

ಬಿಜೆಪಿ ನಾಯಕರು ರಾಜಕೀಯ ಟೀಕೆ ಮಾಡಿ ಕಾಲಹರಣ ಮಾಡುವ ಬದಲು ಕೇಂದ್ರ ಸರ್ಕಾರದ ಬಳಿ ಮಾತನಾಡಿ, ತಕ್ಷಣ ರಸಗೊಬ್ಬರ ಪೂರೈಕೆ ಮಾಡಿಸಲಿ ಎಂದು ಮುಖ್ಯಮಂತ್ರಿಗಳು ತಾಕೀತು ಮಾಡಿದ್ದಾರೆ.

- Advertisement - 

ರಾಜ್ಯಕ್ಕೆ ಕೊಡಬೇಕಾದಷ್ಟು ಗೊಬ್ಬರ ಕೊಡದೆ ಕೇಂದ್ರ ಸರ್ಕಾರ ರಾಜ್ಯದ ರೈತರ ವಿರೋಧಿಯಾಗಿದೆ. ನಾನು ಮತ್ತು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದು ವಾರ ಕಳೆದರೂ, ಬಾಕಿ ರಸಗೊಬ್ಬರ ಬಿಡುಗಡೆಯಾಗಿಲ್ಲ. ಬಿಜೆಪಿ ಸಂಸದರು ಮತ್ತು ರಾಜ್ಯ ಪ್ರತಿನಿಧಿಸುವ ಕೇಂದ್ರ ಸಚಿವರು ಕೇಂದ್ರದ ಜೊತೆ ಮಾತನಾಡಿ ಗೊಬ್ಬರ ಕೊಡಿಸಲಿ ಎಂದು ಸಿಎಂ ಆಗ್ರಹ ಮಾಡಿದ್ದಾರೆ.

ವಿಜಯೇಂದ್ರನಿಂದ ನಾವು ಪಾಠ ಕಲಿಯಬೇಕಾ? ಅವರ ಅಪ್ಪ ಬಿ.ಎಸ್‌.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರಸಗೊಬ್ಬರ ಕೊಡಲು ಸಾಧ್ಯವಾಗದೆ, ಇಬ್ಬರು ರೈತರನ್ನು ಗೋಲಿಬಾರ್ ಮಾಡಿ ಸಾಯಿಸಿದರು. ನಮ್ಮನ್ನು ಪ್ರಶ್ನೆ ಮಾಡುವ ಇವರಿಗೆ ನಾಚಿಕೆಯಾಗಬೇಕು ಎಂದು ಸಿದ್ದರಾಮಯ್ಯ ತರಾಟೆ ತೆಗೆದುಕೊಂಡಿದ್ದಾರೆ.

 

 

Share This Article
error: Content is protected !!
";