ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ 2026ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ ಅನುಮೋದಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.
2026ರ ಹಂಗಾಮಿನಲ್ಲಿ ಮಿಲ್ಲಿಂಗ್ ಕೊಬ್ಬರಿಗೆ (ನ್ಯಾಯಯುತ ಸರಾಸರಿ ಗುಣಮಟ್ಟ) ಪ್ರತಿ ಕ್ವಿಂಟಲ್‌ಗೆ 12,027 ರೂ. ಮತ್ತು ಬಾಲ್ ಕೊಬ್ಬರಿಗೆ MSP ಪ್ರತಿ ಕ್ವಿಂಟಲ್‌ಗೆ 12,500 ರೂ. ಎಂದು ನಿಗದಿಪಡಿಸಲಾಗಿದೆ.
ನಮ್ಮ ರೈತರ ಆದಾಯ ಹೆಚ್ಚಿಸಲು ಮತ್ತು ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಹಾಗೂ ಲಾಭದಾಯಕ ಬೆಲೆ ಸಿಗುವುದನ್ನು ಖಚಿತಪಡಿಸಿಕೊಳ್ಳಲು ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬದ್ಧವಾಗಿದೆ.
ಈ ರೈತ-ಸ್ನೇಹಿ ನಿರ್ಧಾರಕ್ಕಾಗಿ ಆದರಣೀಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ, ಕೇಂದ್ರ ಕೃಷಿಸಚಿವ ಶಿವರಾಜ್ ಚೌಹಣ್ ಅವರಿಗೆ ರಾಜ್ಯದ ಸಮಸ್ತ ರೈತರ ಪರವಾಗಿ ವಿಜಯೇಂದ್ರ ಕೃತಜ್ಞತಾಪೂರ್ವಕ ಧನ್ಯವಾದ ಅರ್ಪಿಸಿದ್ದಾರೆ.

