ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದ ಜೈಲುಗಳು ಉಗ್ರರ ಸ್ಲೀಪರ್ ಸೆಲ್ ಗಳಾಗಿ ಮಾರ್ಪಟ್ಟಿರುವ ಶಂಕೆ ಇದ್ದು, ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ NIA ತನಿಖೆ ನಡೆಸಬೇಕು ಎಂದು ನವೆಂಬರ್ 10 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಮುಖೇನ ವಿನಂತಿಸಿದ್ದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಈಗ ಕೇಂದ್ರ ಸರ್ಕಾರ ಕರ್ನಾಟಕದ ಜೈಲುಗಳಲ್ಲಿ ಉಗ್ರರ ನಂಟು ಹೊಂದಿರುವ ಖೈದಿಗಳ ವಿಚಾರಣೆಗೆ ಮುಂದಾಗಿದ್ದು, ಜೈಲಿನಲ್ಲಿರುವ ಖೈದಿಗಳಿಗೆ ಮೊಬೈಲ್ ಸೇರಿದಂತೆ ರಾಜಾತಿಥ್ಯ ಸಿಗುತ್ತಿರುವುದಕ್ಕೆ ಕರ್ನಾಟಕ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣವೇ ನೇರ ಕಾರಣ ಎನ್ನುವುದರಲ್ಲಿ ಅನುಮಾನವೇ ಇಲ್ಲ.
ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ದೇಶದ ಸುರಕ್ಷತೆ, ಭದ್ರತೆ ಬಗ್ಗೆ ರಾಜಿ ಮಾಡಿಕೊಳ್ಳುವಷ್ಟು ಕೆಳಮಟ್ಟಕ್ಕೆ ಇಳಿಯುವ ಕಾಂಗ್ರೆಸ್ ಪಕ್ಷದ ದೇಶದ್ರೋಹಿ ಮನಸ್ಥಿತಿ ನಿಜಕ್ಕೂ ಅಸಹ್ಯಕರ ಮತ್ತು ಅಕ್ಷಮ್ಯ.
ಮುಂದಿನ ದಿನಗಳಲ್ಲಿ ಕರ್ನಾಟಕದ ಜನತೆ ಈ ದೇಶದ್ರೋಹಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅಶೋಕ್ ಎಚ್ಚರಿಸಿದ್ದಾರೆ.

