ಮೇಲ್ಸೇತುವೆ, ನಿಲ್ದಾಣ ಮಂಜೂರು ಮಾಡಿದ ಕೇಂದ್ರ ಸರ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 
 ಚನಪಟ್ಟಣ ತಾಲೂಕಿನ ವಂದರಗುಪ್ಪೆ ಗ್ರಾಮದಲ್ಲಿ  LC-44 ಕಿಲೋ ಮೀಟರ್ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ಗೆ ಫ್ಲೈ-ಓವರ್ ನಿರ್ಮಿಸುವಂತೆ ಕೋರಿದ್ದ ಮಂಡ್ಯ ಸಂಸದರು ಹಾಗೂ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರ ಮನವಿಗೆ ಕೇಂದ್ರ ರೈಲ್ವೆ ಸಚಿವರಾದ ವೈಷ್ಣವ್ ಅಶ್ವಿನ್ ಅವರು ಸ್ಪಂದಿಸಿದ್ದಾರೆ.

ರೈಲ್ವೆ ಇಲಾಖೆಯಿಂದ ಮೇಲ್ಸೇತುವೆಯ ಯೋಜನಾ ವರದಿ (DPR) ತಯಾರಿ ಹಂತಯಲ್ಲಿದ್ದು, ಶೀಘ್ರದಲ್ಲೇ ಕಾಮಗಾರಿ ಶುರುವಾಗಲಿದೆ ಎಂದು ತಿಳಿಸಿದ್ದಾರೆ.

- Advertisement - 

ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರ  ಪ್ರಯತ್ನದ ಫಲವಾಗಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೋಡಿ ಶೆಟ್ಟಿಪುರ ಮತ್ತು ಸಿದ್ದಾಪುರ ಢಕಲೆ ಗ್ರಾಮಗಳಲ್ಲಿ ಬಸ್ ತಂಗುದಾಣ ನಿರ್ಮಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಇದರಿಂದ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಹೆಚ್ಚಿನ ಅನುಕೂಲವಾಗಲಿದೆ.

ಈ ಸಂಬಂಧ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿರುವ ಕೇಂದ್ರದ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ನಿತಿನ್ ಗಡ್ಕರಿ ಅವರು, “NH-275 ರ ಬೆಂಗಳೂರು-ಮೈಸೂರು ವಿಭಾಗದಲ್ಲಿ ಕೋಡಿ ಶೆಟ್ಟಿಪುರ ಮತ್ತು ಸಿದ್ದಾಪುರ ಢಕ್ಲೆ ಗ್ರಾಮಗಳಲ್ಲಿ ಬಸ್ ತಂಗುದಾಣಗಳನ್ನು ನಿರ್ಮಿಸಲು ಅನುಮೋದನೆ ನೀಡಿದ್ದು, ಈಗಾಗಲೇ ಬಿಡ್ ಅನ್ನು ಆಹ್ವಾನಿಸಿದ್ದಾರೆ.

- Advertisement - 

ಅದೇ ರೀತಿ ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಕೆ.ಆ‌ರ್.ಪೇಟೆ ತಾಲೂಕಿನ ಗಂಜಿಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬುಡಕಟ್ಟು ಜನರಿರುವ ಪೂವನಹಳ್ಳಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಮಂಡ್ಯ ಸಂಸದರು ಹಾಗೂ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಮುಂದಾಗಿದ್ದಾರೆ.

ಅವರ ವಿಶೇಷ ಕಾಳಜಿ ಮತ್ತು ಪರಿಶ್ರಮದಿಂದ  ಕೇಂದ್ರ ಸರ್ಕಾರದ ಪಿಎಂ-ಜನ್‌ಮನ್ ಯೋಜನೆ (ಆದಿವಾಸಿ ಜನಜಾತಿ ನ್ಯಾಯ ಅಭಿಯಾನ)ಗೆ  ಮಂಡ್ಯದ ಪೂವನಹಳ್ಳಿ ಆಯ್ಕೆಯಾಗಿದೆ.

ಈ ವಿಚಾರವಾಗಿ ಕುಮಾರಸ್ವಾಮಿಯವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮಂಡ್ಯದ ಜನರ ಪರವಾಗಿ ಹಾಗೂ ವೈಯಕ್ತಿಕವಾಗಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

 

Share This Article
error: Content is protected !!
";