ಕನ್ನಡದ ಬಗ್ಗೆ ‘ಮೊಸಳೆ ಕಣ್ಣೀರು ಸುರಿಸುವ’ ಮುಖ್ಯಮಂತ್ರಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡದ ಬಗ್ಗೆ ಮೊಸಳೆ ಕಣ್ಣೀರು ಸುರಿಸುವಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮುಖವಾಡ ಕಳಚಿಬಿದ್ದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.

ಕನ್ನಡ ಶಾಲೆಗಳು ಮುಚ್ಚುತ್ತಿವೆ, ಇರುವ ಶಾಲೆಗಳು ದೈನೇಸಿ ಪರಿಸ್ಥಿತಿಯಲ್ಲಿವೆ, ಆ ಶಾಲೆಗಳಲ್ಲೂ ಶಿಕ್ಷಕರಿಲ್ಲ, 60,000 ಶಿಕ್ಷಕರ ಹುದ್ದೆಗಳು ಖಾಲಿ ಉಳಿದಿವೆ, ಸರ್ಕಾರದ ಖಜಾನೆಯಲ್ಲಿ ದುಡ್ಡಿಲ್ಲ, ಸರ್ಕಾರದ ಬಳಿ ಏನೇನೂ ಉಳಿದಿಲ್ಲ ಇವರಿಂದ ಕನ್ನಡ ತನ ಹೇಗೆ ಉಳಿಯಲು ಸಾಧ್ಯ? ಎಂದು ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಮುಖ್ಯಮಂತ್ರಿ ಚಂದ್ರು ಪ್ರಶ್ನಿಸಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

ಈ ಸರ್ಕಾರದಿಂದ ಕನ್ನಡದ ಉದ್ಧಾರ ಸಾಧ್ಯವೇ ಇಲ್ಲ, ಕನ್ನಡ ಶಾಲೆಗಳ ಅಸ್ತಿತ್ವ ಉಳಿಯುವ ಭರವಸೆ ಇಲ್ಲ, ಶಿಕ್ಷಕರಿಗಂತೂ ಕೆಲಸ ಇಲ್ಲವೇ ಇಲ್ಲ ಎಂಬ ವಾಸ್ತವ ಪರಿಸ್ಥಿತಿಯನ್ನು ಬಿಚ್ಚಿಡಲಾಗಿದೆ. ಕರ್ನಾಟಕವನ್ನು ಅಭಿವೃದ್ಧಿ ಶೂನ್ಯ ರಾಜ್ಯವಾಗಿಸಿರುವ ಕಾಂಗ್ರೆಸ್ ಸರ್ಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ.

ತನ್ನ ಶೂನ್ಯ ಪರಿಸ್ಥಿತಿಯನ್ನು ಮುಚ್ಚಿಕೊಳ್ಳಲು ಕನ್ನಡಿಗರ ದಿಕ್ಕು ತಪ್ಪಿಸುವ ಅಸತ್ಯದ ವಿವಾದಗಳನ್ನು ಸೃಷ್ಟಿಸಿ ರಾಜ್ಯದಲ್ಲಿ ಗೊಂದಲ ಮೂಡಿಸುತ್ತಿದೆ ಎಂದು ಅವರು ತರಾಟೆ ತೆಗೆದುಕೊಂಡರು.

 

 

- Advertisement -  - Advertisement - 
Share This Article
error: Content is protected !!
";