ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಚಾಂಪಿಯನ್ಶಿಪ್ ಗೆದ್ದಾಗ, ಕರ್ನಾಟಕ ಮತ್ತು ಬೆಂಗಳೂರಿನ ಹೆಮ್ಮೆಯ ತಂಡಕ್ಕೆ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ
ಜೂನ್ 4 ರ ಸಂಜೆ ಸತ್ಕಾರ ಸಮಾರಂಭ ಏರ್ಪಡಿಸಿ ಕಾರ್ಯಕ್ರಮದಲ್ಲಿ ಕನ್ನಡಿಗರು ಭಾಗವಹಿಸಬೇಕೆಂದು ಮುಖ್ಯಮಂತ್ರಿಯವರೇ ಟ್ವೀಟ್ ಮಾಡಿದ್ದಾರೆ ಈಗ ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು, ಈ ಕಾರ್ಯಕ್ರಮಕ್ಕೆ ಪೊಲೀಸ ಇಲಾಖೆ ಅನುಮತಿ ನೀಡದಿದ್ದರೂ ಕಾರ್ಯಕ್ರಮ ಆಯೋಜಿಸಿ 11 ಮಂದಿ ಸಾವಿಗೆ ಕಾರಣವಾದರು ಎಂದು ಅವರು ದೂರಿದರು.