ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗುತ್ತಿಗೆದಾರ ಸಚಿನ್‌ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್‌ಖರ್ಗೆಗೆ ಸ್ವತಃ ಸಿಎಂ ಸಿದ್ದರಾಮಯ್ಯ ತನಿಖೆಗೂ ಮೊದಲೇ ಕ್ಲೀನ್‌ಚಿಟ್‌ಕೊಟ್ಟಿದ್ದಾರೆ ಎಂದು ಸಿಎಂ ವಿರುದ್ಧ ಜೆಡಿಎಸ್ ಹರಿಹಾಯ್ದಿದೆ.
ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರ ವಿರುದ್ಧ ಕೊಲೆ ಬೆದರಿಕೆ, ಲಂಚ ಪಡೆದು ವಂಚಿಸಿರುವ ಗಂಭೀರ ಆರೋಪಗಳಿದ್ದರು, ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರ ಅವರ ರಕ್ಷಣೆಗೆ ನಿಂತಿದೆ ಎಂದು ಜೆಡಿಎಸ್ ದೂರಿದೆ.
ಕಳಂಕಿತ ಸಚಿವರ ಬೆನ್ನಿಗೆ ನಿಂತಿರುವ ಸಿದ್ದರಾಮಯ್ಯ, ಪ್ರಕರಣದಲ್ಲಿ ಪ್ರಿಯಾಂಕ್‌ಖರ್ಗೆ ಪಾತ್ರವಾಗಲಿ, ಸಾಕ್ಷ್ಯಗಳಾಗಲಿ ಇಲ್ಲ ಎಂದು ಸ್ವಯಂ ತನಿಖಾಧಿಕಾರಿಯಂತೆ ಹೇಳಿಕೆ ನೀಡಿದ್ದಾರೆ ಎಂದು ಜೆಡಿಎಸ್ ಅಸಮಾಧಾನ ವ್ಯಕ್ತಪಡಿಸಿದೆ.
ಪ್ರಕರಣ ಸಿಐಡಿ ತನಿಖೆಗೆ ವಹಿಸಿ ಇನ್ನೂ 2 ದಿನಗಳು ಕಳೆದಿಲ್ಲ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿಐಡಿ ತನಿಖಾ ವರದಿ ಬರುವ ಮೊದಲೇ ಕ್ಲೀನ್‌ಚಿಟ್‌ನೀಡಿ ಜಡ್ಜ್‌ಮೆಂಟ್‌ಕೊಟ್ಟು ಬಿಟ್ಟಿದ್ದಾರೆ. ಈಗ ಸಿಐಡಿ ತನಿಖೆಯು ಪಾರದರ್ಶಕವಾಗಿ ಮತ್ತು ನಿಷ್ಪಕ್ಷಪಾತವಾಗಿ ನಡೆಯುತ್ತದೆಯೇ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ ಎಂದು ಜೆಡಿಎಸ್ ಅನುಮಾನ ವ್ಯಕ್ತಪಡಿಸಿದೆ.
ಲೂಟಿಕೋರ, ಕೊಲೆಗಡುಕ ಕಾಂಗ್ರೆಸ್‌ಸರ್ಕಾರದ ಅವಧಿಯಲ್ಲಿ ನಡೆಯುವ ಹಗರಣಗಳು ಮತ್ತು ಭ್ರಷ್ಟಾಚಾರಗಳಲ್ಲಿ ನ್ಯಾಯ ಎಂಬುದು ಕೇವಲ ಮರೀಚಿಕೆ. ಹೀಗಾಗಿ ಗುತ್ತಿಗೆದಾರ ಸಚಿನ್‌ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಜೆಡಿಎಸ್ ಆಗ್ರಹ ಮಾಡಿದೆ.