ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಅಂಗವಾಗಿ ಬೆಳಗಾವಿಯ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿದ್ದ,
“ರಾಜ್ಯ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ, ಮಹಿಳಾ ಸ್ವಸಹಾಯ ಗುಂಪುಗಳ ಉತ್ಪನ್ನಗಳ ಮಾರಾಟ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಶುಭ ಹಾರೈಸಿದರು.
ಕೌಶಲ್ಯಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸರ್ಕಾರದ ಮುಖ್ಯಕಾರ್ಯದರ್ಶಿ ಡಾ.ಶಾಲಿನಿರಜನೀಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

