ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪ್ರೊ.ಎಂ.ಗೋವಿಂದ ರಾವ್‌ಅವರ ಅಧ್ಯಕ್ಷತೆಯ ಪ್ರಾದೇಶಿಕ ಅಸಮತೋಲನ ನಿವಾರಣೆ ಸಮಿತಿ ಅವರು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಸಮಿತಿಯ ಅಂತಿಮ ವರದಿ ಸಲ್ಲಿಸಿದರು.
ಸಚಿವರಾದ ಈಶ್ವರ ಖಂಡ್ರೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸಮಿತಿ ಸದಸ್ಯರಾದ ಎಸ್.ಟಿ.ಬಾಗಲಕೋಟೆ, ಸೂರ್ಯನಾರಾಯಣ ರಾವ್, ಸಂಗೀತ.ಎನ್.ಕೆ, ಎಲ್.ಕೆ.ಅತೀಕ್, ಸದಸ್ಯ ಕಾರ್ಯದರ್ಶಿ ವಿಶಾಲ್ ಅವರು ಉಪಸ್ಥಿತರಿದ್ದರು.

