ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರನ್ನು ಎರಡು ತಿಂಗಳವರೆಗೆ ವಿಜಯಪುರ ಜಿಲ್ಲೆಗೆ ಬರದಂತೆ ನಿರ್ಬಂಧ ಆದೇಶವನ್ನು ಹೊರಡಿಸಿರುವ ರಾಜ್ಯದ ಲಜ್ಜೆಗೇಡಿ ಕಾಂಗ್ರೆಸ್ ಸರ್ಕಾರ, ಮತ್ತೊಮ್ಮೆ ಹಿಂದೂ ಧರ್ಮ ಗುರುಗಳ ದನಿಯನ್ನ ಅಡಗಿಸುವ ದುಸ್ಸಾಹಸಕ್ಕೆ ಕೈಹಾಕಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ಮಾಡಿದ್ದಾರೆ.
ಈ ಹಿಂದೆ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ದಿವಂಗತ ಶ್ರೀ ಚಂದ್ರಶೇಖರ ನಾಥ ಸ್ವಾಮೀಜಿ ವಿರುದ್ಧ ಎಫ್ಐಆರ್ ಹಾಕಿದ್ದ ಕಾಂಗ್ರೆಸ್ ಸರ್ಕಾರ,
ಈಗ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರ ಮೇಲೆ ನಿಷೇಧ ಹೇರುವ ಮೂಲಕ ಕರ್ನಾಟಕ ಕಾಂಗ್ರೆಸ್ ಪಕ್ಷಕ್ಕೆ ವಾಕ್ ಸ್ವಾತಂತ್ರ್ಯ, ಸಂವಿಧಾನದಲ್ಲಿ ನಂಬಿಕೆಯಿಲ್ಲ ಎನ್ನುವುದನ್ನ ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಅಶೋಕ್ ಆರೋಪಿಸಿದ್ದಾರೆ.

