ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದ ಗುತ್ತಿಗೆದಾರರಿಗೆ ಆತ್ಮಹತ್ಯೆ ಭಾಗ್ಯದ ಬಳಿಕ ಈಗ ದಯಾಮರಣ ಭಾಗ್ಯ!! ಕಲ್ಪಿಸಿದೆ ಎಂದು ಬಿಜೆಪಿ ಆತಂಕ ವ್ಯಕ್ತಪಡಿಸಿದೆ.
ದಾವಣಗೆರೆಯ ಹರಿಹರದ ಗುತ್ತಿಗೆದಾರ ಮೊಹಮ್ಮದ್ ಮಝರ್ ಕಾಮಗಾರಿ ಮುಗಿಸಿ ಒಂದೂವರೆ ವರ್ಷವಾದರೂ ಇದುವರೆಗೂ ಕಾಂಗ್ರೆಸ್ ಸರ್ಕಾರ ಬಿಲ್ ಪಾವತಿಸಿಲ್ಲ.
ಬಿಲ್ ಪಾವತಿಯಾಗದ ಕಾರಣ ಗುತ್ತಿಗೆದಾರ ಈಗ ದಯಾಮರಣಕ್ಕೆ ಅರ್ಜಿ ಸಲ್ಲಿಸಿರುವುದು ಭ್ರಷ್ಟ ಕಾಂಗ್ರೆಸ್ ಸರ್ಕಾರದ ದುಷ್ಟ ವ್ಯವಸ್ಥೆಯ ಪ್ರತೀಕ. ಸಿಎಂ ಸಿದ್ದರಾಮಯ್ಯ ಅವರೆ, ಇದೇನಾ ನಿಮ್ಮ ಅಸಲಿ ಕರ್ನಾಟಕ ಮಾಡೆಲ್..??!! ಎಂದು ಬಿಜೆಪಿ ವಾಗ್ದಾಳಿ ಮಾಡಿದೆ.