ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಮನೆ ಬಾಗಿಲಿಗೆ ತೆರಳಿ ಉಚಿತವಾಗಿ ಖಾತೆ ನೀಡುವ ವಿನೂತನ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಏಪ್ರಿಲ್ ತಿಂಗಳಿನಿಂದ ಈ ಪ್ರಕ್ರಿಯೆ ಆರಂಭವಾಗಲಿದೆ ಎಂದು ಕಾಂಗ್ರೆಸ್ ತಿಳಿಸಿದೆ.
ಪ್ರತಿಯೊಂದು ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಅಕಸ್ಮಾತ್ ತಪ್ಪಿಹೋಗಿದ್ದಲ್ಲಿ ಅಂತವರು ತಮ್ಮ ದಾಖಲೆಗಳನ್ನು ಮತ್ತೆ ನೀಡಬಹುದು.
ಬೆಂಗಳೂರು ನಗರದ ಪ್ರತಿ ಕ್ಷೇತ್ರದ ಶಾಸಕರ ಬಳಿ ಮಾತನಾಡಿ, ಕ್ಷೇತ್ರವಾರು ಕಾರ್ಯಕ್ರಮ ನಡೆಸಿ ಈ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕಮಾರ್ ತಿಳಿಸಿದ್ದಾರೆ.