ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗ್ಯಾರಂಟಿಯಿಂದ ಬರಗೆಟ್ಟಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಧನದಾಹಕ್ಕೆ ಕೊನೆಯೇ ಇಲ್ಲವಾಗಿದೆ ಎಂದು ಜೆಡಿಎಸ್ ಟೀಕಿಸಿದೆ.
ಖಜಾನೆ ತುಂಬಿಸಿಕೊಳ್ಳಲು ಮತ್ತೆ ಹಾಲಿನ ದರ ಏರಿಸಿ ರಾಜ್ಯದ ಜನರ ಸುಲಿಗೆಗೆ ಮುಂದಾಗಿದೆ. ಸಿದ್ದರಾಮಯ್ಯ ಸರ್ಕಾರ ಹಾಲು ಉತ್ಪಾದಕರ 600 ಕೋಟಿ ಪ್ರೋತ್ಸಾಹ ಧನವನ್ನು ಬಾಕಿ ಕೊಡದೆ ಸತಾಯಿಸುತ್ತಿದೆ. ಈಗ ರೈತರ ಹೆಸರು ಹೇಳಿಕೊಂಡು ಹಾಲಿನ ದರ ಹೆಚ್ಚಿಸಲು ಹೊರಟಿದೆ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.
ಸುಳ್ಳು ಭರವಸೆ ಮೂಲಕ ಅಧಿಕಾರಕ್ಕೆ ಬಂದು ಬೆಲೆ ಏರಿಕೆಯನ್ನೇ ಬಂಡವಾಳ ಮಾಡಿಕೊಂಡಿರುವ ಕಾಂಗ್ರೆಸ್‌ಸರ್ಕಾರಕ್ಕೆ ಧಿಕ್ಕಾರ ಎಂದು ಜೆಡಿಎಸ್ ತಿಳಿಸಿದೆ.