ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಮ್ಮ ಸರ್ಕಾರ ಎಂದಿಗೂ ಒಂದು ವರ್ಗ, ಧರ್ಮದ ಜನರನ್ನು ಓಲೈಸಲು ಯಾವುದೇ ಕಾರ್ಯಕ್ರಮ ಕೈಗೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕನ್ನಡ ನಾಡು ಸರ್ವಜನಾಂಗದ ಶಾಂತಿಯ ತೋಟವಾಗಬೇಕೆಂಬುದು ನಮ್ಮ ಆಶಯ. ದೇಶದಲ್ಲಿ ಭಿನ್ನ ಜಾತಿ – ಧರ್ಮಗಳಿಗೆ ಕೂಡಿದ್ದರೂ ನಾವೆಲ್ಲರೂ ಮೊದಲು ಮಾನವರಾಗಬೇಕು. ಯಾವ ಧರ್ಮವೂ ಮನುಷ್ಯತ್ವದ ಹೊರತಾದ ಮೃಗೀಯ ತತ್ವವನ್ನು ಬೋಧಿಸುವುದಿಲ್ಲ. ಮಾನವತಾ ಸಮಾಜವನ್ನು ನಿರ್ಮಿಸಬೇಕು. ದ್ವೇಷ, ಆಸೂಯೆಗಳಿಂದ ಯಾವ ಸಾಧನೆಯೂ ಸಾಧ್ಯವಿಲ್ಲ.
ಸಮಸಮಾಜ, ಸೌಹಾರ್ದಯುತ ಸಮಾಜ ನಿರ್ಮಾಣವಾಗಬೇಕಾದರೆ ಪರಸ್ಪರ ಗೌರವಾದರಗಳು ಇರಬೇಕು ಮುಖ್ಯಮಂತ್ರಿ ತಿಳಿಸಿದರು.