ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಾಸನದ ಎಂ.ಜಿ. ರಸ್ತೆಯ ಸರ್ಕಾರಿ ಕಾನೂನು ಕಾಲೇಜಿನ 24 ವಿದ್ಯಾರ್ಥಿಗಳ ಭವಿಷ್ಯಕ್ಕೆ ಕಲ್ಲು ಹಾಕಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಜೆಡಿಎಸ್ ತಿಳಿಸಿದೆ.
2023ರ ಶೈಕ್ಷಣಿಕ ವರ್ಷದಲ್ಲಿ ಕಾನೂನು ಪದವಿಗೆ ಪ್ರವೇಶ ಪಡೆದಿದ್ದ ವಿದ್ಯಾರ್ಥಿಗಳಿಗೆ 3 ವರ್ಷ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಅಂದು ರಾಜ್ಯ ಸರ್ಕಾರದ ಸೂಚನೆಯಂತೆ ಹೆಚ್ಚುವರಿ ಪ್ರವೇಶಕ್ಕೆ ಅನುಮೋದನೆ ನೀಡಿದ್ದ ಹುಬ್ಬಳ್ಳಿಯ ಕಾನೂನು ವಿಶ್ವ ವಿದ್ಯಾಲಯ, ನಾಲ್ಕನೇ ವರ್ಷದ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದೆ ಎಂದು ಜೆಡಿಎಸ್ ದೂರಿದೆ.
ಈಗ ಬಾರ್ ಕೌನ್ಸಿಲ್ ಅಫ್ ಇಂಡಿಯಾ ಅನುಮೋದನೆಯ ನೆಪವೊಡ್ಡಿ ವಿದ್ಯಾರ್ಥಿಗಳನ್ನು ಬೀದಿಗೆ ತಳ್ಳಿರುವುದು ಖಂಡನೀಯ.
ಇಂದು ಪರೀಕ್ಷೆ ಇದ್ದು ಇನ್ನೂ ಪ್ರವೇಶ ಪತ್ರ ಸಿಗದೆ ಅತಂತ್ರವಾಗಿರುವ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಸಿದ್ದರಾಮಯ್ಯ ಸರ್ಕಾರ ಮಧ್ಯ ಪ್ರವೇಶಿಸಿ, ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕಿದೆ ಎಂದು ಜೆಡಿಎಸ್ ಆಗ್ರಹ ಮಾಡಿದೆ.

