ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರೈತ ವಿರೋಧಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ನಾಡಿನ ಅನ್ನದಾತರ ಪಾಲಿಗೆ ಶಾಪವಾಗಿ ಪರಿಣಮಿಸಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಹರಿಹಾಯ್ದಿದೆ.
ರಾಜ್ಯಾದ್ಯಂತ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿ 2 ತಿಂಗಳಾದರೂ 4,482 ಕೋಟಿ ರೂ. ಕಬ್ಬಿನ ಬಾಕಿ ಹಣ ಸಿಗದೇ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಬ್ಬು ಪೂರೈಸಿದ 14 ದಿನಗಳಲ್ಲಿ ಬಿಲ್‌ಪಾವತಿಸಬೇಕು ಎಂದು ಕಾಯ್ದೆಯಿದೆ.
ಆದರೆ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಗುಂಪು, ಒದ್ದು ಕಿತ್ತುಕೊಳ್ಳಲು ಡಿ.ಕೆ.ಶಿವಕುಮಾರ್ ಗುಂಪುಗಳ ನಡುವೆ ಮುಸುಕಿನ ಗುದ್ದಾಟದಲ್ಲಿ ರೈತರು ಬಲಿಯಾಗುತ್ತಿದ್ದಾರೆ. ಬೇಜವಾಬ್ದಾರಿ ಕಾಂಗ್ರೆಸ್‌ಸರ್ಕಾರಕ್ಕೆ ರೈತರ ಸಂಕಷ್ಟಗಳನ್ನು ಪರಿಹರಿಸಲು ಸಮಯವೇ ಇಲ್ಲವಾಗಿದೆ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.
ಕುರ್ಚಿಗಾಗಿ ಸಿದ್ದರಾಮಯ್ಯ VS ಡಿಕೆಶಿ ಬಣ ಬಡಿದಾಟದಲ್ಲಿ ಅನ್ನದಾತರು ಸೇರಿದಂತೆ ರಾಜ್ಯದ ಜನರು ಬಡವಾಗುತ್ತಿದ್ದಾರೆ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.