ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಡಾ. ಕುಲದೀಪ್ ಅವರು ಕಳೆದ 6 ತಿಂಗಳಿಂದ ಸಂಬಳ ದೊರೆಯದ ಕಾರಣಕ್ಕೆ ರಾಜೀನಾಮೆ ನೀಡಿರುವ ಘಟನೆ ಕಾಂಗ್ರೆಸ್ ಸರ್ಕಾರ ಎಷ್ಟು ದಿವಾಳಿ ಆಗಿದೆ ಎನ್ನುವುದಕ್ಕೆ ಮತ್ತೊಂದು ತಾಜಾ ಉದಾಹರಣೆಯಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಾಪ್ರಹಾರ ಮಾಡಿದ್ದಾರೆ.
ಕಳೆದ ಅಕ್ಟೋಬರ್ ನಲ್ಲಿ ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡ ಗ್ರಾಮದಲ್ಲಿ ಸಂಬಳ ಸಿಗದೆ ಗ್ರಂಥಪಾಲಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು.
ಸಿಎಂ ಸಿದ್ದರಾಮಯ್ಯನವರೇ, ಹಳ್ಳಿಗಾಡಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ವೈದ್ಯರು ಸಿಗುವುದೇ ಕಷ್ಟ. ಅಂತಹುದರಲ್ಲಿ ಇರುವ ವೈದ್ಯರುಗಳನ್ನು ಕೂಡ ಹೀಗೆ ಸಂಬಳ ಕೊಡದೆ ವೈದ್ಯರು ರಾಜೀನಾಮೆ ನೀಡುವ ಪರಿಸ್ಥಿತಿ ತಂದಿಟ್ಟರೆ ಗ್ರಾಮೀಣ ಪ್ರದೇಶದ ಬಡ ಜನರು ಆರೋಗ್ಯ ಸೇವೆ ಪಡೆಯಲು ಏನು ಮಾಡಬೇಕು ಎಂದು ಅಶೋಕ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.?
ಇನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆಯ ಜವಾಬ್ದಾರಿ ವಹಿಸಿಕೊಂಡಾಗಿನಿಂದ ಇಲಾಖೆ ಅನಾರೋಗ್ಯ ಪೀಡಿತವಾಗಿದ್ದು, ಬರೀ ಡಿನ್ನರ್ ಮೀಟಿಂಗ್ ಗಳಲ್ಲೇ ಕಾಲಕಳೆಯುತ್ತಾ ಟೈಂಪಾಸ್ ಮಾಡುತ್ತಿದ್ದಾರೆ.

