ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುತ್ತೇವೆ ಎಂದು ಸುಳ್ಳು ಭರವಸೆ ನೀಡಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ರೈತರಿಗೆ ವಂಚಿಸಿದೆ ಎಂದು ಜೆಡಿಎಸ್ ಆರೋಪಿಸಿದೆ.
ಸಿಎಂ ಕುರ್ಚಿಗಾಗಿ ಶಾಸಕರ ಖರೀದಿ ಕೇಂದ್ರ ತೆರೆದಿರುವ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ರಾಜ್ಯದ ರೈತರ ಸಂಕಷ್ಟವನ್ನು ಕೇಳುತ್ತಿಲ್ಲ.
ಮೆಕ್ಕೆಜೋಳ ಬೆಳೆಗಾರರು ಸೂಕ್ತ ಬೆಲೆ ಸಿಗದೆ, ಮಾರಾಟ ಮಾಡಲಾಗದೆ ಕಣ್ಣೀರಿಡುತ್ತಿದ್ದರೂ ಸಚಿವರುಗಳು ಸ್ಪಂದಿಸುತ್ತಿಲ್ಲ.
ನುಡಿದಂತೆ ನಡೆಯದ ಕಾಂಗ್ರೆಸ್‌ಸರ್ಕಾರದ ವಿರುದ್ಧ ಅನ್ನದಾತರು ಆಕ್ರೋಶದ ಕಟ್ಟೆ ಹೊಡೆದಿದೆ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.

