ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಬಾಣಂತಿಯರ ಮರ್ಡರ್‌ನಿಲ್ಲುತ್ತಿಲ್ಲ ಎಂದು ಬಿಜೆಪಿ ಹರಿಹಾಯ್ದಿದೆ.
ದಿನಕ್ಕೊಬ್ಬರಂತೆ ಗರ್ಭಿಣಿಯರು, ಬಾಣಂತಿಯರು, ನವಜಾತ ಶಿಶುಗಳು ಸರ್ಕಾರಿ ಆಸ್ಪತ್ರೆಯಲ್ಲಿ ಬಲಿಯಾಗುತ್ತಲೇ ಇದ್ದಾರೆ. ಆದರೂ ಲಜ್ಜೆಬಿಟ್ಟಿರುವ ಅನಾರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿಲ್ಲ. “ಗುಳುಂರಾವ್” ಆರೋಗ್ಯ ಸಚಿವರಾಗಿರುವವರೆಗೂ ಈ ಸಾವುಗಳು ನಿಲ್ಲುವುದಿಲ್ಲ ಎಂದು ಬಿಜೆಪಿ ಹರಿಹಾಯ್ದಿದೆ.
ಭ್ರಷ್ಟ ಸಿಎಂ ಸಿದ್ದರಾಮಯ್ಯ ಅವರೇ, ರಾಜ್ಯದಲ್ಲಿ ಇನ್ನೂ ಎಷ್ಟು ಬಲಿಬೇಕು? ಎಂದು ಬಿಜೆಪಿ ಖಾರವಾಗಿ ಪ್ರಶ್ನಿಸಿದೆ.
ಕರ್ನಾಟಕದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಘೋಷಣೆಯಾಗಿದೆ. ಯಾವ ಸೇವೆಯೂ ರಾಜ್ಯದಲ್ಲಿ ಲಭ್ಯವಾಗುತ್ತಿಲ್ಲ. ಆದರೆ 60% ಕಮಿಷನ್‌ಮಾತ್ರ ನಿರಂತರವಾಗಿದೆ. ಆಡಳಿತ ಯಂತ್ರದ ಟಯರ್‌ಪಂಚರ್‌ಆಗಿದೆ. ಕರ್ನಾಟಕ ಕಾಂಗ್ರೆಸ್ ನಾಯಕರು ಮಾತ್ರ ಕುಂಭಮೇಳ, ಕುಂಭಸ್ನಾನವನ್ನು ಟೀಕಿಸುವುದರಲ್ಲಿ ನಿರತರಾಗಿದ್ದಾರೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಹಾವು ಕಡಿತದಂತಹ ಗಂಭೀರ ಪ್ರಕರಣವನ್ನು ಕಾಂಗ್ರೆಸ್‌ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳದ ಪರಿಣಾಮ ರಾಜ್ಯದಲ್ಲಿ ಹಾವು ಕಡಿತಕ್ಕೊಳಗಾಗಿ ಸಾಯುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಸರ್ಕಾರಕ್ಕೆ ಗರ ಬಡಿದಿರುವಾಗ ಹಾವು ಕಡಿತಕ್ಕೊಳಗಾದವರ ಬಗ್ಗೆ ಚಿಂತಿಸಲು ಸಾಧ್ಯವೇ ಇಲ್ಲ ಎಂದು ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದೆ.