ಕಾಂಗ್ರೆಸ್ ಸರ್ಕಾರಕ್ಕೆ ಗೋಹತ್ಯಾ ಶಾಪ ತಟ್ಟದೇ ಇರದು!

News Desk

ಕಾಂಗ್ರೆಸ್ ಸರ್ಕಾರಕ್ಕೆ ಗೋಹತ್ಯಾ ಶಾಪ ತಟ್ಟದೇ ಇರದು!
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗೋಹಂತಕ ಕಾಂಗ್ರೆಸ್ ಸರ್ಕಾರಕ್ಕೆ ಶಾಪ ತಟ್ಟದೇ ಇರದು! ಎಂದು ಬಿಜೆಪಿ ಎಚ್ಚರಿಸಿದೆ.

ಬೆಂಗಳೂರಿನ ಚಾಮರಾಜಪೇಟೆ,
ರಾಮನಗರ
ಹೊನ್ನಾವರ ತಾಲ್ಲೂಕಿನ ಸಾಲ್ಕೋಡ ಗ್ರಾಮ,
ಶಿವಮೊಗ್ಗ ಜಿಲ್ಲೆಯ ಹೊಸನಗರ,
ಚಿಕ್ಕಮಗಳೂರು
ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಗೋಮಾತೆಯ ಕೆಚ್ಚಲು ಕತ್ತರಿಸುವ ಅಮಾನುಷ ಕೃತ್ಯ ರಾಜ್ಯದಲ್ಲಿ ಪದೇ ಪದೇ ಮರುಕಳಿಸುತ್ತಲೇ ಇದ್ದು, ಚಿಕ್ಕಮಗಳೂರಿನಲ್ಲಿ ಗೋವಿನ ಮೇಲೆ ವಿಕೃತಿ ಮೆರೆಯುವ ಮೂಲಕ ಕಿಡಿಗೇಡಿಗಳು ಮತ್ತೊಮ್ಮೆ ಕ್ರೌರ್ಯ ಪ್ರದರ್ಶನ ಮಾಡಿದ್ದಾರೆ ಬಿಜೆಪಿ ಕಿಡಿಕಾರಿದೆ.

- Advertisement - 

ತುಷ್ಟೀಕರಣ, ಅರಾಜಕತೆಯಿಂದ ನಿಸ್ತೇಜವಾಗಿರುವ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಲಹೀನತೆಯನ್ನೇ ಬಂಡವಾಳವಾಗಿಸಿಕೊಂಡಿರುವ ಮತಾಂಧ ಶಕ್ತಿಗಳು, ಗೋವುಗಳ ಮೇಲೆ ಪ್ರಹಾರ ಮಾಡುವ ಮೂಲಕ ಹಿಂದೂಗಳಿಗೆ ಸವಾಲು ಹಾಕುತ್ತಿವೆ.

ಸಿಎಂ ಸಿದ್ದರಾಮಯ್ಯ ನವರೇ, ಗೋವುಗಳ ಮೇಲೆ ಪದೇ ಪದೇ ನಡೆಯುತ್ತಿರುವ ಈ ದಾಳಿಗಳನ್ನು ಗಮನಿಸಿದರೆ ಇದರ ಹಿಂದೆ ದೊಡ್ಡ ಜಾಲವೇ ಅಡಗಿದಂತಿದೆ. ಮತಾಂಧ ಶಕ್ತಿಗಳು, ಮೂಲಭೂತವಾದಿ ಶಕ್ತಿಗಳ ದೊಡ್ಡ ಜಿಹಾದಿ ಷಡ್ಯಂತ್ರವೆ ಇದ್ದಂತಿದೆ.

- Advertisement - 

ಸರ್ಕಾರ ಇದನ್ನ ಅತ್ಯಂತ ಗಂಭೀರವಾಗಿ ಪರಿಗಣಿಸಿ ಈ ದುಷ್ಕೃತ್ಯಗಳಿಗೆ ಕಡಿವಾಣ ಹಾಕದೆ ಹೋದರೆ, ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಜೆಪಿ ಎಚ್ಚರಿಕೆ ನೀಡಿದೆ.

Share This Article
error: Content is protected !!
";