ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಿರಿಯ ನಾಗರಿಕರ ವೈದ್ಯಕೀಯ ಚಿಕಿತ್ಸೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದಿರುವ 5 ಲಕ್ಷ ರೂಪಾಯಿ ವರೆಗಿನ ಉಚಿತ ಆರೋಗ್ಯ ವಿಮೆ ಒದಗಿಸುವ
ಆಯುಷ್ಮಾನ್ ಭಾರತ್ ಯೋಜನೆ ಅನುಷ್ಠಾನ ಮಾಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಾಜಕೀಯ ಮಾಡುತ್ತಿದ್ದು ಇಲ್ಲಸಲ್ಲದ ಕುಂಟು ನೆಪ ಹೇಳುವ ಮೂಲಕ ರಾಜ್ಯದ ಹಿರಿಯ ನಾಗರಿಕರಿಗೆ ಅನ್ಯಾಯ ದ್ರೋಹ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ಸ್ವಾಮಿ ಸಿಎಂ ಸಿದ್ದರಾಮಯ್ಯ ನವರೇ, ದೇವರು ಕೊಟ್ಟರೂ ಪೂಜಾರಿ ಕೊಡಲಿಲ್ಲ ಎನ್ನುವಂತೆ, ಕೇಂದ್ರ ಸರ್ಕಾರದ ಯೋಜನೆಯನ್ನು ಜಾರಿ ಮಾಡುವುದಕ್ಕೂ ನಿಮ್ಮ ಸರ್ಕಾರದ ಕೈಯಲ್ಲಿ ಆಗಲಿಲ್ಲ ಅಂದ್ರೆ ಏನು ಹೇಳೋಣ. ಜನಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲೂ ಕ್ಷುಲ್ಲಕ ರಾಜಕಾರಣ ಮಾಡುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಕೀಳು ಮನಸ್ಥಿತಿಗೆ ಇದು ಮತ್ತೊಂದು ನಿದರ್ಶನ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಅಶೋಕ್ ವಾಗ್ದಾಳಿ ಮಾಡಿದ್ದಾರೆ.