ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಸರ್ಕಾರಕ್ಕೆ ಸರ್ಕಾರವೇ ಭ್ರಷ್ಟಾಚಾರದ ಕೂಪದಲ್ಲಿ ಸಿಲುಕಿ ಒದ್ದಾಡುತ್ತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣಗಳಿಂದ ಒಂದಲ್ಲ ಒಂದು ಹಗರಣಗಳು ಸರ್ಕಾರವನ್ನು ಸುತ್ತಿಕೊಳ್ಳುತ್ತಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.
ಇದರ ನಡುವೆ ಭ್ರಷ್ಟಾಚಾರದ ಆರೋಪ ಹೊತ್ತುಕೊಂಡಿರುವ ಅಧಿಕಾರಿಗಳಿಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮುಂಬಡ್ತಿ ನೀಡಿರುವುದು ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಪ್ರಚೋದನೆ ನೀಡಿದಂತಿದೆ.
ಲೋಕಾಯುಕ್ತ ದಾಳಿಗೆ ಒಳಗಾಗಿರುವ, ವಿವಿಧ ಭ್ರಷ್ಟಾಚಾರ ಪ್ರಕರಣಗಳಲ್ಲಿ ಸಿಲುಕಿರುವ, ಇಲಾಖಾ ವಿಚಾರಣೆ ಎದುರಿಸುತ್ತಿರುವ ಅಧಿಕಾರಿಗಳಿಗೆ ಸಿದ್ದರಾಮಯ್ಯ ಸರ್ಕಾರ ಬಡ್ತಿ ನೀಡುವ ಮೂಲಕ ಭ್ರಷ್ಟ ಅಧಿಕಾರಿಗಳ ಅಕ್ರಮ ಸಂಪಾದನೆಯಲ್ಲಿ ಕಾಂಗ್ರೆಸ್ ನಾಯಕರಿಗೂ ಪಾಲು ಸಿಗುತ್ತಿದೆ ಎಂಬುದನ್ನು ಪರೋಕ್ಷವಾಗಿ ಒಪ್ಪಿಕೊಂಡಿದೆ ಎಂದು ಬಿಜೆಪಿ ದೂರಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಿಗಳಿಗೆ ಅಕ್ರಮ ಎಸಗಲು ಮುಕ್ತ ಸ್ವಾತಂತ್ರ್ಯ ನೀಡಿ, ಸಿಕ್ಕಿ ಬಿದ್ದರೆ ರಕ್ಷಿಸುವ ಭರವಸೆ ನೀಡುತ್ತಿದೆ. ಇದರ ಪರಿಣಾಮವಾಗಿಯೇ ರಾಜಾರೋಷವಾಗಿ ಭ್ರಷ್ಟಾಚಾರ ನಡೆಯುತ್ತಿದೆ. ಅಧಿಕಾರಿಗಳು ಕೋಟಿ ಕೋಟಿ ಅಕ್ರಮ ಸಂಪಾದನೆ ಮಾಡಿ, ಕೆಪಿಸಿಸಿ ಕಚೇರಿಗೂ ಕಪ್ಪ ನೀಡುತ್ತಿರುವ ಪರಿಣಾಮ ಪದೋನ್ನತಿ ಹೊಂದುತ್ತಿದ್ದಾರೆ ಎಂದು ಬಿಜೆಪಿ ದೂರಿದೆ.