ಹಿಂದುಳಿದ ವರ್ಗಗಳನ್ನು ತುಚ್ಛವಾಗಿ ಕಾಣುವ ಕಾಂಗ್ರೆಸ್ ಸರ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಹಿಂದ ಹೆಸರಿನಲ್ಲೇ ಉಸಿರಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ಅಲ್ಪಸಂಖ್ಯಾತರನ್ನಷ್ಟೇ ಆದ್ಯತೆಯಾಗಿರಿಸಿಕೊಂಡಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದುಳಿದ ವರ್ಗಗಳನ್ನು ತುಚ್ಛವಾಗಿ ಕಾಣಲಾಗುತ್ತಿದೆ ಎಂದು ಬಿಜೆಪಿ ಗಂಭೀರ ಆರೋಪ ಮಾಡಿದೆ.

ಅಹಿಂದ ಹೆಸರಿನಲ್ಲಿ ಅಧಿಕಾರ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಹಿಂದುಳಿದ ವರ್ಗಗಳ ನಿಗಮಗಳಿಗೆ 1600 ಕೋಟಿ ಅನುದಾನ ನೀಡುವುದಾಗಿ ಘೋಷಿಸಿದ್ದರು. ಆದರೆ ಇದುವರೆಗೆ ಕೇವಲ ರೂ. 347 ಕೋಟಿ ಬಿಡುಗಡೆ ಮಾಡಲಾಗಿದೆ.

- Advertisement - 

ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ 1000 ಕೋಟಿ ಅನುದಾನ ನೀಡಲಾಗಿತ್ತು. ಅತ್ಯಂತ ಹಿಂದುಳಿದ ವರ್ಗಗಳೂ ಆರ್ಥಿಕ ಮತ್ತು ಶೈಕ್ಷಣಿಕವಾಗಿ ಮುಖ್ಯವಾಹಿನಿಗೆ ಬರಬೇಕೆಂದು ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಣ್ಣ ಸಮುದಾಯಗಳಿಗೂ ಪ್ರತ್ಯೇಕ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸಲಾಗಿತ್ತು. ಆದರೆ ಕಾಂಗ್ರೆಸ್‌ಸರ್ಕಾರ ಹಣ ಬಿಡುಗಡೆ ಮಾಡದೆ ಅನ್ಯಾಯವೆಸಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

- Advertisement - 
Share This Article
error: Content is protected !!
";