ಕಾಲ್ತುಳಿತ 11 ಸಾವು ದುರಂತದ ಹೊಣೆ ಕಾಂಗ್ರೆಸ್ ಸರ್ಕಾರವೇ ಹೊತ್ತುಕೊಳ್ಳಬೇಕು-ಕುಮಾರಸ್ವಾಮಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ 11 ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.

- Advertisement - 

ಗೆಲುವಿನ ಸಂಭ್ರಮಕ್ಕೆ ಮುನ್ನವೇ ಮುಗ್ಧರ ಜೀವ ನಷ್ಟವಾಗಿರುವುದು ನನಗೆ ಅತೀವ ದುಃಖ ತಂದಿದೆ. ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದೆ, ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣ. ದುರಂತದ ಹೊಣೆಯನ್ನು ರಾಜ್ಯ ಕರ್ನಾಟಕ ಕಾಂಗ್ರೆಸ್ ಸರಕಾರವೇ ಹೊತ್ತುಕೊಳ್ಳಬೇಕು.

- Advertisement - 

ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸುವುದರ ಜತೆಗೆ ಮೃತರ ಕುಟುಂಬಗಳ ನೆರವಿಗೆ ಸರಕಾರ ಕೂಡಲೇ ಧಾವಿಸಬೇಕು ಎಂದು ಕುಮಾರಸ್ವಾಮಿ ತಾಕೀತು ಮಾಡಿದ್ದಾರೆ.

ಕ್ರೀಡಾಂಗಣ ಹಾಗೂ ವಿಧಾನಸೌಧದ ಬಳಿ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಬಂದಿದ್ದ ಕ್ರಿಕೆಟ್ ಪ್ರೇಮಿಗಳು ಗಾಬರಿ, ಆತುರಕ್ಕೆ ಒಳಗಾಗದೆ ಕ್ಷೇಮವಾಗಿ ಮನೆ ತಲುಪಬೇಕು ಎಂಬುದು ನನ್ನ ಕಳಕಳಿ. ಪೊಲೀಸರು ಈ ನಿಟ್ಟಿನಲ್ಲಿ ತುರ್ತುಕ್ರಮ ವಹಿಸಿ ಜನರಿಗೆ ನೆರವಾಗಬೇಕು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

- Advertisement - 

 

Share This Article
error: Content is protected !!
";